Saturday, September 12, 2026

BDA Apartments

ಮುಡಾ ಕೇಸ್: ಇಡಿ ವಿಚಾರಣೆಗೆ ಹಾಜರಾದ ಮರೀಗೌಡ BDA JK_Adv BDA Adv
Home Front Page ಮುಡಾ ಕೇಸ್: ಇಡಿ ವಿಚಾರಣೆಗೆ ಹಾಜರಾದ ಮರೀಗೌಡ

ಮುಡಾ ಕೇಸ್: ಇಡಿ ವಿಚಾರಣೆಗೆ ಹಾಜರಾದ ಮರೀಗೌಡ

ಬೆಂಗಳೂರು,ನವೆಂಬರ್,14,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಈ ಮಧ್ಯೆ ಇದೀಗ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ವಿಚಾರಣೆಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಇಡಿ ಕಚೇರಿಗೆ ಮುಡಾ ಮಾಜಿ ಅಧ್ಯಕ್ಷ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದಾರೆ. ಸಿಎಂ ಪತ್ನಿಗೆ ಸೈಟ್ ಹಂಚಿಕೆ ಬಗ್ಗೆ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ಇತ್ತಚೆಗಷ್ಟೆ ಕೆ. ಮರೀಗೌಡ ಅವರು ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಡಾ ಪ್ರಕರಣವನ್ನ ಇತ್ತ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು  ಈಗಾಗಲೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಅವರನ್ನ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

Key words: Muda case, Mari Gowda, appeared, ED, hearing