Wednesday, October 28, 2026

Dasara Wishes

Happy Dasara
Home Front Page ಪುರುಷರಿಗೂ ಉಚಿತ ಬಸ್ ಪ್ರಯಾಣ ವಿಚಾರ: ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗರೆಡ್ಡಿ

ಪುರುಷರಿಗೂ ಉಚಿತ ಬಸ್ ಪ್ರಯಾಣ ವಿಚಾರ: ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗರೆಡ್ಡಿ

ಹುಬ್ಬಳ್ಳಿ ,ನವೆಂಬರ್,15,2024 (www.justkannada.in): ಶಕ್ತಿ ಯೋಜನೆಯಡಿ ಪುರುಷರಿಗೂ ಉಚಿತ ಸರ್ಕಾರಿ ಬಸ್ ಪ್ರಯಾಣದ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ,  ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ ಪ್ರಯಾಣ ಪ್ರಸ್ತಾವನೆ ಸದ್ಯಕ್ಕೆ ಇಲ್ಲ. ಸದ್ಯ ಯೋಜನೆಯ ಅಡಿ ಮಹಿಳೆಯರಿಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದರು.

ನಿನ್ನೆ ಡಿಕೆ ಶಿವಕುಮಾರ್ ಹೇಳಿದ್ದಾರೆ.  ಡಿಕೆ ಶಿವಕುಮಾರ್ ಭೇಟಿ ಮಾಡಿದಾಗ ಈ ಬಗ್ಗೆ ಕೇಳುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

ಮಕ್ಕಳ ದಿನಾಚರಣೆ  ಅಂಗವಾಗಿ ನಿನ್ನೆ ವಿಧಾನಸೌಧದಲ್ಲಿ  ನಡೆದ ಮಕ್ಕಳ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ,  ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಕುರಿತು ಪ್ರಶ್ನಿಸಿದ್ದನು. ಈ ಬಗ್ಗೆ ಉತ್ತರಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರು ಸರ್ಕಾರದಲ್ಲಿ ಚರ್ಚಿಸಿ ಒಂದು ವಯೋಮಿತಿಯವರೆಗೆ ಯೋಚಿಸಿ ಮುಂದೆ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ್ದರು.

Key words: Free bus, men, Minister, Ramalingareddy, clarified