Sunday, November 1, 2026

Dasara Wishes

Happy Dasara
Home Crime ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣು

ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣು

ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣು puliyogare,ayyangar WhatsApp 11 16 at 12.03.42 PM

ಮೈಸೂರು,ನವೆಂಬರ್,18,2024 (www.justkannada.in): ಪ್ರೀತಿಸಿ ಮದುವೆಯಾಗಿದ್ದ ಗೃಹಿಣಿ ತನ್ನ ಪತಿಯ ಜೊತೆ ಕಲಹದಿಂದಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಹಳೆ ಕೆಸರೆಯಲ್ಲಿ ಈ ಘಟನೆ ನಡೆದಿದೆ. ಕೋಮಲ (25)ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಕೋಮಲ ಹಾಗೂ ರಾಜು ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ಮಧ್ಯೆ ನಿನ್ನೆ ತಡ ರಾತ್ರಿ ಗಂಡ ಹೆಂಡತಿ ನಡುವೆ ಗಲಾಟೆ ಶುರುವಾಗಿದ್ದು ಇದರಿಂದ ಮನನೊಂದು ಕೋಮಲ ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಂಪತಿ 8 ತಿಂಗಳ ಹಿಂದೆ ಹಳೆ ಕೆಸರೆಯಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಿದ್ದರು.  ಕ್ಷುಲ್ಲಕ ಕಾರಣಕ್ಕೆ  ಶುರುವಾದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ.  ಸ್ಥಳಕ್ಕೆ ಎನ್ ಆರ್. ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಕುರಿತು ಪ್ರಕರಣ ದಾಖಲಾಗಿದೆ.

Key words: mysore, housewife, committed, suicide