Saturday, September 19, 2026

BDA Apartments

ನ.25ರಿಂದ 30 ದಿನಗಳ KAS ಪರೀಕ್ಷಾ ತರಬೇತಿ ಶಿಬಿರ BDA JK_Adv BDA Adv
Home Front Page ನ.25ರಿಂದ 30 ದಿನಗಳ KAS ಪರೀಕ್ಷಾ ತರಬೇತಿ ಶಿಬಿರ

ನ.25ರಿಂದ 30 ದಿನಗಳ KAS ಪರೀಕ್ಷಾ ತರಬೇತಿ ಶಿಬಿರ

ನ.25ರಿಂದ 30 ದಿನಗಳ KAS ಪರೀಕ್ಷಾ ತರಬೇತಿ ಶಿಬಿರ puliyogare,ayyangar WhatsApp 11 16 at 12.03.42 PM

ಮೈಸೂರು,ನವೆಂಬರ್,20,2024 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ದಿನಾಂಕ:25.11.2024ರ ಬೆಳಿಗ್ಗೆ 11 ಗಂಟೆಗೆ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ 30 ದಿನಗಳ ಕೆಎಎಸ್ ಪರೀಕ್ಷಾ ತರಬೇತಿ ಶಿಬಿರದ ಉದ್ಘಾಟನೆಯನ್ನು 2014ನೇ ಬ್ಯಾಚ್‌ ನ ಐಎಎಸ್ ಅಧಿಕಾರಿ, ಚಾಮರಾಜನಗರ ಜಿಲ್ಲೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಉದ್ಘಾಟಿಸಿ ಅಭ್ಯರ್ಥಿಗಳಿಗೆ ಶುಭಹಾರೈಸುವರು.

ಕರ್ನಾಟಕ ಸರ್ಕಾರದ ಹಣಕಾಸು ಇಲಾಖೆ ಉಪ ಯೋಜನಾ ನಿರ್ದೇಶಕ 2021ನೇ ಬ್ಯಾಚ್ ನ ಐಎಎಸ್ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್ ಪರೀಕ್ಷಾ ಸಿದ್ಧತೆ ಕುರಿತು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡಿ ಸಂವಾದ ನಡೆಸುವರು. 2005 ನೇ ಸಾಲಿನ ಕೆಎಎಸ್ ಅಧಿಕಾರಿ ಮೈಸೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ. ಪಿ. ಶಿವರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಪರೀಕ್ಷಾ ಟಿಪ್ಸ್ ನೀಡುವರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ಕೆ.ಬಿ. ಪ್ರವೀಣ ಉಪಸ್ಥಿತರಿರುವರು. ತರಬೇತಿಗೆ ಸೇರಬಯಸುವ ಆಸಕ್ತರು ಈಗಲೂ ಪ್ರವೇಶಾತಿ ಪಡೆಯಬಹುದೆಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.

ಸಂಪರ್ಕ ಸಂಖ್ಯೆ- 0821-2515944/9964760090

Key words: KSOU, 30 days, KAS Exam, Training