Tuesday, September 15, 2026

BDA Apartments

ರಾಜ್ಯದಲ್ಲಿರುವುದು ಎ1 ಆರೋಪಿ ಸರ್ಕಾರ: ಮುಡಾ ಕೇಸ್ ಸಿಬಿಐಗೆ ವಹಿಸಿ- ಶಾಸಕ ಶ್ರ...
Home Front Page ರಾಜ್ಯದಲ್ಲಿರುವುದು ಎ1 ಆರೋಪಿ ಸರ್ಕಾರ: ಮುಡಾ ಕೇಸ್ ಸಿಬಿಐಗೆ ವಹಿಸಿ- ಶಾಸಕ ಶ್ರೀವತ್ಸ

ರಾಜ್ಯದಲ್ಲಿರುವುದು ಎ1 ಆರೋಪಿ ಸರ್ಕಾರ: ಮುಡಾ ಕೇಸ್ ಸಿಬಿಐಗೆ ವಹಿಸಿ- ಶಾಸಕ ಶ್ರೀವತ್ಸ

ರಾಜ್ಯದಲ್ಲಿರುವುದು ಎ1 ಆರೋಪಿ ಸರ್ಕಾರ puliyogare,ayyangar WhatsApp 11 16 at 12.03.42 PM

ಮೈಸೂರು,ನವೆಂಬರ್,21,2024 (www.justkannada.in):  ರಾಜ್ಯದಲ್ಲಿರುವುದು ಎ1 ಆರೋಪಿ ಸರ್ಕಾರ. ಎ1 ಆಗಿರುವವರು ರಾಜ್ಯ ಸರ್ಕಾರ ನಡೆಸುತ್ತಿದ್ದಾರೆ. ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಎಂದು ಶಾಸಕ ಶ್ರೀವತ್ಸ ಆಗ್ರಹಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಶ್ರೀವತ್ಸ, ಎ3  ಆರೋಪಿ ರಾತ್ರೋರಾತ್ರಿ ಲೋಕಾಯುಕ್ತ ಕಚೇರಿಗೆ ಹೋಗುತ್ತಾರೆ. ರಾತ್ರಿ ದಾಖಲೆ ಕೊಡಿ ಅಂತಾ ಅಧಿಕಾರಿಗಳು ಕೇಳಿದ್ರಾ? ನಮಗೆ ಹಲವು ಅನುಮಾನ ಶುರುವಾಗಿದೆ.  ಹಿರಿಯ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡುತ್ತೇವೆ ಎಂದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಎಂ ತನಿಖೆ ಮಾಡಲು ಆಗುತ್ತಾ?  ಮುಡಾ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ಸಿಬಿಐ ನವರು ಯಾವುದೇ ಮುಲಾಜಿಲ್ಲದೆ ತನಿಖೆ ಮಾಡುತ್ತಾರೆ.ನವೆಂಬರ್ 26 ರಂದು ಹೈಕೋರ್ಟ್ ಗಮನಕ್ಕೆ ತರುತ್ತೇವೆ ಎಂದರು.

Key words: A1 accused, government, Muda case, MLA, Srivatsa