Friday, July 31, 2026

BDA Apartments

Home Crime ಉದ್ಯಮಿ ಗೌತಮ್ ಅದಾನಿ ವಿರುದ್ದ ಬಂಧನ ವಾರೆಂಟ್ ಹೊರಡಿಸಿದ ಅಮೇರಿಕಾ ಕೋರ್ಟ್

ಉದ್ಯಮಿ ಗೌತಮ್ ಅದಾನಿ ವಿರುದ್ದ ಬಂಧನ ವಾರೆಂಟ್ ಹೊರಡಿಸಿದ ಅಮೇರಿಕಾ ಕೋರ್ಟ್

ನ್ಯೂಯಾರ್ಕ್, ನವೆಂಬರ್ 21,2024 (www.juskannada.in):  ಲಂಚ ಪಾವತಿ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕಾದ ನ್ಯಾಯಾಲಯ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ.

ಗೌತಮ್ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪಗಳು ದಾಖಲಾಗಿದ್ದು, ಗೌತಮ್ ಅದಾನಿ ವಿರುದ್ದ ಬಂಧನ ವಾರೆಂಟ್ ಹೊರಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಪ್ರಮುಖವಾಗಿ ಕೇಳಿಬಂದಿದೆ. ಕೆನಡಾದ ಪೆನ್ಷನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗೂ ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಆದ ಸೈರಿಲ್ ಕೆಬನೆಸ್ ಅವರೂ ಆರೋಪಿತರಲ್ಲಿ ಸೇರಿದ್ದಾರೆ.

ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರ ಹೆಸರು ಈ ಪ್ರಕರಣದಲ್ಲಿ ತಳುಕುಹಾಕಿಕೊಂಡಿದೆ.

ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್​ಇಸಿ ನ್ಯೂಯಾರ್ಕ್​ನ ಡಿಸ್ಟ್ರಿಕ್ಟ್ ಕೋರ್ಟ್​ನಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಸಿರಿಲ್ ಕೆಬನೆಸ್ ವಿರುದ್ಧ ಸಿವಿಲ್ ಚಾರ್ಜ್ ಹಾಕಿದೆ. ಲಂಚ ಪಾವತಿ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕಾದ ನ್ಯಾಯಾಲಯ ಉದ್ಯಮಿ ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದೆ.

ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್ ​ಗೂ ಅಧಿಕ ಮೊತ್ತದಷ್ಟು ಲಂಚ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. 2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.

Key words: US court, arrest warrant, against, Gautam Adani