Saturday, August 22, 2026

BDA Apartments

Home Crime ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿಗರ ಬಂಧನ

ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ವಿದೇಶಿಗರ ಬಂಧನ

ಬೆಂಗಳೂರು,ನವೆಂಬರ್,21,2024 (www.justkannada.in):  ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡೇವಿಡ್ (35),  ಕೋಫಿ (34) ಬಂಧಿತ ಡ್ರಗ್ಸ್ ಪೆಡ್ಲರ್ ಗಳು. ಬಂಧಿತರಿಂದ  1ಕೋಟಿ  ಮೌಲ್ಯದ 1ಕೆಜಿ  520 ಗ್ರಾಂ  ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.  ಹೆಸರಘಟ್ಟದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.

ಶೈಕ್ಷಣಿಕ ವಿಸಾ ಮೇಲೆ ಭಾರತಕ್ಕೆ ಬಂದಿದ್ದ ಇಬ್ಬರು ಆರೋಪಿಗಳು   ಡ್ರಗ್ಸ್ ದಂಧೆಗೆ ಇಳಿದಿದ್ದರು. ಮಧ್ಯರಾತ್ರಿ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು  ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Two foreigners,  drug, arrested, Bangalore