Saturday, October 10, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ : ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಮುನ್ನಡೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಫಲಿತಾಂಶ : ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಮುನ್ನಡೆ

ಮುಂಬೈ,ನವೆಂಬರ್,23,2024 (www.justkannada.in): ಇಂದು ಮಹಾರಾಷ್ಟ್ರ, ಜಾರ್ಖಂಡ್  ವಿಧಾನಸಭಾ ಚುನಾವಣಾ ಫಲಿತಾಂಶ ಹಾಗೂ ಕರ್ನಾಟಕದ ಮೂರು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು ಈ ನಡುವೆ ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಭರ್ಜರಿ ಮುನ್ನಡೆ ಕಾಯ್ದುಗೊಂಡಿದೆ.

ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 176 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.  ಮಹಾ ವಿಕಾಸ್ ಅಘಾಡಿ 87 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೇ ಇತರೇ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.  ಮಹಾರಾಷ್ಟ್ರದಲ್ಲಿ ನವೆಂಬರ್ 20ರಂದು ವಿಧಾನಸಭೆ ಚುನಾವಣೆ ನಡೆದಿತ್ತು. ರಾಜ್ಯದಲ್ಲಿ ಶೇಕಡಾ 66 ರಷ್ಟು ಮತದಾನವಾಗಿದ್ದು, ಬಿಜೆಪಿ, ಶಿವಸೇನೆ ಮತ್ತು ಕಾಂಗ್ರೆಸ್ ಒಳಗೊಂಡ ಮಹಾಯುತಿ ಮೈತ್ರಿಕೂಟವು ಮಹಾರಾಷ್ಟ್ರದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ಭರವಸೆಯಲ್ಲಿದೆ.

ಶಿವಸೇನೆ (ಯುಬಿಟಿ) ಮತ್ತು ಎನ್ಸಿಪಿ (ಎಸ್ಸಿಪಿ) ಒಳಗೊಂಡ ಕಾಂಗ್ರೆಸ್ ನೇತೃತ್ವದ ಮಹಾ ವಿಕಾಸ್ ಅಘಾಡಿ ಹಿನ್ನಡೆ ಅನುಭವಿಸಿದೆ.

Key words: Maharashtra, Assembly Election, Results led, Mahayuti