Friday, August 21, 2026

BDA Apartments

Home Front Page ಮಾಜಿ ಸಿಎಂ ಬೊಮ್ಮಾಯಿ ಪುತ್ರನಿಗೆ ಮುಖಭಂಗ: ‘ಕೈ’ ಅಭ್ಯರ್ಥಿ ಯಾಸೀರ್ ಪಠಾಣ್ ಗೆ ಭರ್ಜರಿ ಗೆಲುವು

ಮಾಜಿ ಸಿಎಂ ಬೊಮ್ಮಾಯಿ ಪುತ್ರನಿಗೆ ಮುಖಭಂಗ: ‘ಕೈ’ ಅಭ್ಯರ್ಥಿ ಯಾಸೀರ್ ಪಠಾಣ್ ಗೆ ಭರ್ಜರಿ ಗೆಲುವು

ಶಿಗ್ಗಾವಿ,ನವೆಂಬರ್,23,2024 (www.justkannada.in): ತೀವ್ರ ಕುತೂಹಲ ಮೂಡಿಸಿದ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಭಾರಿ ಮುಖಭಂಗವಾಗಿದೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಸೋಲು ಕಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡು ಬಂದಿದ್ದ ಭರತ್ ಬೊಮ್ಮಾಯಿ ಅವರಿಗೆ ಯಾಸೀರ್ ಪಠಾಣ್ ಟಫ್ ಫೈಟ್ ಕೊಡುತ್ತಾ ಬಂದು ಕೊನೆಗೂ ಲೀಡ್ ಹೆಚ್ಚಿಸಿಕೊಂಡು ಗೆಲುವು ಸಾಧಿಸಿದರು. ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಗೆ  93,234 ಮತಗಳು, ಎನ್ ಡಿಎ ಅಭ್ಯರ್ಥಿ ಭರತ್ ಬೊಮ್ಮಾಯಿಗೆ 79756  ಮತಗಳು ಲಭಿಸಿವೆ.

Key words: Shiggavi, congress candidate, Yasir Pathan, wins