Saturday, September 26, 2026

BDA Apartments

ಸಿಎಂ ವಿರುದ್ದ ಮುಡಾ ಕೇಸ್ : ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ BDA JK_Adv BDA Adv
Home Front Page ಸಿಎಂ ವಿರುದ್ದ ಮುಡಾ ಕೇಸ್ : ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಿಎಂ ವಿರುದ್ದ ಮುಡಾ ಕೇಸ್ : ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು, ನವೆಂಬರ್,26,2024 (www.justkannada.in) ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ 50:50 ಪ್ರಕರಣ ಸಂಬಂಧ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಡಿಸೆಂಬರ್ 10ಕ್ಕೆ ಮುಂದೂಡಿಕೆ ಮಾಡಿದೆ.

ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ನ್ಯಾ.ನಾಗಪ್ರಸನ್ನ ಅವರಿದ್ಧ ಪೀಠ ಡಿಸೆಂಬರ್ 10ಕ್ಕೆ ಮುಂದೂಡಿದೆ.  ಡಿಸೆಂಬರ್ 10ರಂದೇ ವಾದ ಪ್ರತಿವಾದ ಮುಗಿಸಲು ಸೂಚನೆ ನೀಡಿದೆ.

ಈ ನಡುವೆ ಇಂದು ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿ ಸಲ್ಲಿಕೆ ಮಾಡಿಲ್ಲ ಎನ್ನಲಾಗಿದೆ.  ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದು, ಸುಮಾರು 400 ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಕೆಗೆ ಮುಂದಾಗಿದ್ದಾರೆ.

Key words: Muda case, CM, High Court, hearing