Monday, September 28, 2026

BDA Apartments

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ BDA JK_Adv BDA Adv
Home Front Page ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ

ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ puliyogare,ayyangar WhatsApp 11 16 at 12.03.4...

ಮುಂಬೈ,ನವೆಂಬರ್,26,2024 (www.justkannada.in):  ಇತ್ತೀಚೆಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ  ಬಿಜೆಪಿ ನೇತೃತ್ವದ ಮಹಾಯುತಿ ಬಹುಮತ ಪಡೆದು ಅಧಿಕಾರಕ್ಕೇರಲು ಸಜ್ಜಾಗಿದ್ದು ಈ ನಡುವೆ ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ ಸಲ್ಲಿಸಿದ್ದಾರೆ.

ಏಕನಾಥ್ ಶಿಂಧೆ ಅವರು ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ರಾಜೀನಾಮೆ ಸಲ್ಲಿಸಿದರು.ಶಿಂಧೆ ಅವರೊಂದಿಗೆ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಕೂಡ ಉಪಸ್ಥಿತರಿದ್ದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿಯ ಮಹಾಮೈತ್ರಿಕೂಟವು ಭಾರಿ ಬಹುಮತವನ್ನು ಸಾಧಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಅವರ ಇಡೀ ಸಂಪುಟ ಕೂಡ ರಾಜೀನಾಮೆ ಸಲ್ಲಿಸಿದೆ. ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಮುಂದಿನ ಸರ್ಕಾರ ರಚನೆಯಾಗುವವರೆಗೂ ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದ್ದಾರೆ.

Key words: Eknath Shinde, resigns, Maharashtra, CM