Friday, August 14, 2026

BDA Apartments

Home Front Page RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ

RTO ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ

ತುಮಕೂರು,ನವೆಂಬರ್,27,2024 (www.justkannada.in): ಮಧುಗಿರಿ ಹಾಗೂ ತಿಪಟೂರು ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿರುವ ಬಗ್ಗೆ ಕೇಳಿ ಬಂದ ಸಾರ್ವಜನಿಕ ಆರೋಪದ ಮೇರೆಗೆ ಮೂರು ಕಡೆ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ.

ತುಮಕೂರು ಲೋಕಾಯುಕ್ತ ಪೊಲೀಸರ ತಂಡ ಆರ್ ಟಿಒ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿಯಲ್ಲಿದ್ದವರಿಂದ ಮಾಹಿತಿ ಸಂಗ್ರಹಿಸುವುದರೊಂದಿಗೆ ಅಧಿಕಾರಿಗಳ ಮೇಲೆ ಸಾರ್ವಜನಿಕರು ದೂರು ಹೇಳಿದರೆ ಎಫ್ ಐಆರ್ ದಾಖಲಿಸಲು ಮುಂದಾಗಿದೆ ಎಂಬ ಮಾಹಿತಿ ದೊರೆತಿದೆ.

ಕಚೇರಿ ಒಳಗೆ ಜನಸಾಮಾನ್ಯರೊಂದಿಗೆ ಮಧ್ಯವರ್ತಿಗಳ ತಪಾಸಣೆ ಮಾಡುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಜನಸಾಮಾನ್ಯರ ಕೆಲಸಗಳನ್ನು ತಡ ಮಾಡಲು ಕಾರಣ ಏನು ಎನ್ನುವುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.ಆರ್.ಟಿ.ಓ ಕಛೇರಿಯಲ್ಲಿ ತಪಾಸಣೆ ನಡೆಸುತಿದ್ದು.ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Key words: Lokayukta, raids, RTO office, inspects