Thursday, August 27, 2026

BDA Apartments

Home Front Page ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲರೂ ಬದಲಾಗಬೇಕು- ಸಚಿವ ಸತೀಶ್ ಜಾರಕಿಹೊಳಿ ನುಡಿ

ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲರೂ ಬದಲಾಗಬೇಕು- ಸಚಿವ ಸತೀಶ್ ಜಾರಕಿಹೊಳಿ ನುಡಿ

ಬೆಂಗಳೂರು,ನವೆಂಬರ್,27,2024 (www.justkannada.in): ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗೆ ಬಂದಿದ್ದು ಈ ಬಗ್ಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾತು ಕೇಳಿಬರುತ್ತಿವೆ. ಕೆಲವರ ಖಾತೆ ಬದಲಾವಣೆ ಬಗ್ಗೆಯೂ ಚರ್ಚೆಯಿದೆ. ಆದರೆ ಯಾವಾಗ ಮಾಡುತ್ತಾರೆ ಎಂದು ಗೊತ್ತಿಲ್ಲ. ಸಂಪುಟ ಪುನಾರಚನೆ ಮಾಡಲುಬಹುದು. ಮಾಡದೆಯೇ ಇರಲೂಬಹುದು. ಎಲ್ಲವೂ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು. ದೆಹಲಿಯಿಂದ ಲಿಸ್ಟ್ ಬಂದರೆ ಎಲ್ಲರೂ ಬದಲಾಗಬೇಕು. ಲಿಸ್ಟ್ ನಲ್ಲಿ ಹೆಸರು ಬಂದರೆ ಮನೆ ಖಾಲಿ ಮಾಡ್ಕೊಂಡು ಹೋಗಬೇಕು. ದೆಹಲಿ ನಾಯಕರ ತೀರ್ಮನವೇ ಎಲ್ಲದಕ್ಕೂಅಂತಿಮ. ನನಗಂತೂ 2 ವರ್ಷಕ್ಕೆ ಸ್ಥಾನ ಬದಲಾವಣೆ ಎಂದು ಯಾರೂ ಹೇಳಿಲ್ಲ  ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಎಕ ಯಾವುದೇ ಲಾಭಿಯಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Key words: Cabinet expansion, Delhi, Minister, Satish Jarkiholi