Sunday, September 13, 2026

BDA Apartments

ಯಡಿಯೂರಪ್ಪಗೆ ಸಿಎಂ ಸ್ಥಾನ ತಪ್ಪಿಸಿದ್ದು ರೇವಣ್ಣ: ಜಿಟಿಡಿ BDA JK_Adv BDA Adv
Home Front Page ಯಡಿಯೂರಪ್ಪಗೆ  ಸಿಎಂ ಸ್ಥಾನ ತಪ್ಪಿಸಿದ್ದು ರೇವಣ್ಣ: ಜಿಟಿಡಿ

ಯಡಿಯೂರಪ್ಪಗೆ  ಸಿಎಂ ಸ್ಥಾನ ತಪ್ಪಿಸಿದ್ದು ರೇವಣ್ಣ: ಜಿಟಿಡಿ

ಯಡಿಯೂರಪ್ಪಗೆ ಸಿಎಂ ಸ್ಥಾನ ತಪ್ಪಿಸಿದ್ದು ರೇವಣ್ಣ puli

ಮೈಸೂರು,ನವೆಂಬರ್,28,2024 (www.justkannada.in): 20 – 20 ಸರ್ಕಾರದ ವೇಳೆ ಬಿ. ಎಸ್ ಯಡಿಯೂರಪ್ಪ ಸಿಎಂ ಆಗಬೇಕಿತ್ತು. ಆದರೆ ಬಿಎಸ್ ಯಡಿಯೂರಪ್ಪಗೆ  ಸಿಎಂ ಸ್ಥಾನ ತಪ್ಪಿಸಿದ್ದು ಹೆಚ್ ಡಿ ರೇವಣ್ಣ ಎಂದು ಶಾಸಕ ಜಿ.ಟಿ ದೇವೇಗೌಡ ಆರೋಪಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಜಿ.ಟಿ ದೇವೇಗೌಡ, ನನ್ನ ತಂದೆ ನಾನು ನನ್ನ ಮಗ ಯಾವತ್ತು ಜೈಲಗಿ ಹೋಗುವ ಸ್ಥಿತಿ ಬಂದಿಲ್ಲ. ಮುಂದೆಯೂ ಅಂತಾ ಸ್ಥಿತಿ ಬರುವುದು ಬೇಡ ಅಂತಾ ಪ್ರಾರ್ಥಿಸುತ್ತೇನೆ. ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಆಗುವುದನ್ನು ತಪ್ಪಿಸಿದ್ದು ಎಚ್ ಡಿ ರೇವಣ್ಣ. 20 – 20 ಸರ್ಕಾರದಲ್ಲಿ ಬಿ ಎಸ್ ಯಡಿಯೂರಪ್ಪ ಸಿಎಂ ಆಗಬೇಕಿತ್ತು. ಈ ಬಗ್ಗೆ ರೇವಣ್ಣ ಒಪ್ಪಿಕೊಂಡು ಕ್ಷಮೆ ಸಹ ಯಾಚಿಸಿದ್ದಾರೆ. ಅವರು ಡಿಸಿಎಂ ಆಗಬೇಕಿತ್ತು ಅದು ಆಗುವುದಿಲ್ಲ ಅನ್ನೋ ಕಾರಣಕ್ಕೆ ತಪ್ಪಿಸಿದರು. ದೊಡ್ಡಗೌಡರ ಜೊತೆ ಮಾತನಾಡಿ ಯಡಿಯೂರಪ್ಪ ಅವರಿಗೆ ಸಿಎಂ ಸ್ಥಾನ ತಪ್ಪಿಸಿದರು ಎಂದರು.

ಇನ್ನು ಮುಂದೆ ನಾನು ರಾಜಕೀಯವಾಗಿ ಯಾರ ವಿರುದ್ದವೂ ಮಾತನಾಡುವುದಿಲ್ಲ. ನನ್ನನ್ನು ಕಳ್ಳ ಅಂದರು ಸಹ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದೇ ಕೊನೇ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಶಾಸಕ ಜಿಟಿ ದೇವೇಗೌಡ ಹೇಳಿದರು.

Key words: HD Revanna, denied, BS Yediyurappa, CM post, GT Devegowda