Monday, August 3, 2026

BDA Apartments

Home Front Page ಸಂವಿಧಾನದ ಪ್ರತಿ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ಸಂವಿಧಾನದ ಪ್ರತಿ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ,ನವೆಂಬರ್,28,2024 (www.justkannada.in):  ಪ್ರಿಯಾಂಕಾ ಗಾಂಧಿ ಅವರು ಇಂದು ವಯನಾಡು ನೂತನ ಸಂಸದೆಯಾಗಿ ಸಂವಿಧಾನದ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕಾರ ಮಾಡಿದರು.

ಲೋಕಸಭೆಗೆ ಪ್ರವೇಶಿಸಿದ ಪ್ರಿಯಾಂಕ ಗಾಂಧಿ ಕೈಯಲ್ಲಿ ಸಂವಿಧಾನದ ಪುಸ್ತಕ ಹಿಡಿದು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಪ್ರಿಯಾಂಕಾ ಅವರಿಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಪ್ರಮಾಣ ವಚನ ಬೋಧಿಸಿದರು.

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. 4 ಲಕ್ಷಕ್ಕೂ ಹೆಚ್ಚು ಮತಗಳ ದಾಖಲೆ ಅಂತರದಿಂದ ಗೆಲುವು ಸಾಧಿಸಿರುವ ಪ್ರಿಯಾಂಕಾ ಗಾಂಧಿ, ಆ ಮೂಲಕ ಪ್ರಪ್ರಥಮ ಬಾರಿಗೆ ಚುನಾಯಿತ ಪ್ರತಿನಿಧಿಯಾಗಿದ್ದಾರೆ.

Key words: Priyanka Gandhi, oath, Wayanad MP