Sunday, August 9, 2026

BDA Apartments

Home Front Page ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆ ಇಲ್ಲ

ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆ ಇಲ್ಲ

ಬೆಂಗಳೂರು,ಡಿಸೆಂಬರ್,4,2024 (www.justkannada.in): ಸದ್ಯಕ್ಕೆ ನಂದಿನಿ ಹಾಲಿನ ದರದಲ್ಲಿ ಯಾವುದೇ ಏರಿಕೆ ಮಾಡಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ  ಮಾತನಾಡಿದ ಭೀಮಾ ನಾಯ್ಕ್,  ಕೆಲ ದಿನಗಳ ಹಿಂದೆ ಹಾಲಿನ ದರ ಏರಿಕೆ ಬಗ್ಗೆ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಎಲ್ಲಾ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಅಂತ ಹೇಳಿದ್ದಾರೆ. ಸದ್ಯಕ್ಕೆ ಹಾಲಿನ ದರ ಏರಿಕೆ ಬಗ್ಗೆ ಮಾಹಿತಿ ಇಲ್ಲ. ಆದರೆ ನಂದಿನಿ ಹಾಲಿನ ದರ ಏರಿಕೆಗೆ ರಾಜ್ಯದ ರೈತರ ಬೇಡಿಕೆ ಇದೆ ಎಂದರು.

ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ, ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಇನ್ನು ಕೆಎಂಎಫ್ ಎಂಡಿ ವರ್ಗಾವಣೆಯಾಗಿದೆ, ಅದು ಆಡಳಿತಾತ್ಮಕ ತೀರ್ಮಾನ ಅಷ್ಟೇ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟಪಡಿಸಿದರು.

Key words: no increase, Nandini milk , price