Friday, October 30, 2026

Dasara Wishes

ಸೆ.30ರೊಳಗೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ರೆ ವಿಧಾನಸೌಧಕ್...
Happy Dasara
Home Front Page GDP ಯಲ್ಲಿ ಇಡೀ ದೇಶದಲ್ಲೇ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ:...

GDP ಯಲ್ಲಿ ಇಡೀ ದೇಶದಲ್ಲೇ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ: ಸಿಎಂ ಸಿದ್ದರಾಮಯ್ಯ

ಮಂಡ್ಯ,ಡಿಸೆಂಬರ್, 4,2024 (www.justkannada.in): GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್.  ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು.

ನಾನು ಬಡತನ ರೇಖೆಗಿಂತ ಕೆಳಗಿಲ್ಲ.  ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗದಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ ತಾರತಮ್ಯ ನಿವಾರಣೆ ಆಗುತ್ತದೆ ಎಂದರು.GDP ಯಲ್ಲಿ ಇಡೀ ದೇಶದಲ್ಲೇ ನಾವೇ ನಂಬರ್ ಒನ್: ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅ...

ನಾನು ಬಡತನ ರೇಖೆಗಿಂತ ಕೆಳಗಿಲ್ಲ.  ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು.  ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ ಅಗತ್ಯ ಇಲ್ಲ ಅಲ್ಲವೇ  ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಈ ದೇಶಕ್ಕೆ ಸಿಕ್ಕ ರಾಜಕೀಯ ಸ್ವಾತಂತ್ರ್ಯ ಯಶಸ್ವಿ ಆಗಬೇಕಾದರೆ, ಪ್ರತಿಯೊಬ್ಬರಿಗೂ ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯ ಸಿಗಬೇಕು ಎನ್ನುವ ಅಂಬೇಡ್ಕರ್ ಅವರ ಮಾತನ್ನು ಉಲ್ಲೇಖಿಸಿ ಈ ಕಾರಣಕ್ಕೇ ನಾವು ಅನ್ನಭಾಗ್ಯ ಮತ್ತು ಆರ್ಥಿಕ ಶಕ್ತಿ ಕೊಡುವ ಐದೈದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಡ ಕುಟುಂಬದವರ ಮತ್ತು ನಮ್ಮ ಹೆಣ್ಣು ಮಕ್ಕಳ ಹಣ ಉಳಿತಾಯ ಆಗಲಿ ಎನ್ನುವ ಕಾರಣದಿಂದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಯೋಜನೆಗಳನ್ನು ನಮ್ಮ ಜನರ ಮನೆ ಬಾಗಿಲಿಗೆ ತಲುಪಿಸಿದ್ದೇವೆ. ಕೈಯಲ್ಲಿ ಕಾಸಿದ್ದರೆ ತಾನೇ ನಮ್ಮ ಜನ ಖರೀದಿಗೆ ಹೋಗೋದು. ಅದಕ್ಕೇ ಜನರ ಕೈಯಲ್ಲಿ ಕಾಸು ಇರುವ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ಕೆ.ಆರ್.ಪೇಟೆ ರಸ್ತೆ, ಕೆರೆ, ಸೇತುವೆಗೆ ಹಣ ಕೊಡ್ತೀನಿ

ಕೆ.ಆರ್.ಪೇಟೆಯಲ್ಲಿ ಹಾಳಾಗಿರುವ ರಸ್ತೆ, ಕೆರೆ, ಸೇತುವೆಗೆ ಹಣ ಕೊಡಬೇಕು ಎನ್ನುವ ಮನವಿ ಬಂದಿದೆ. ನಾವು ಬೇಡಿಕೆಗೆ ತಕ್ಕಷ್ಟು ಹಣವನ್ನು ಖಂಡಿತಾ ಬಿಡುಗಡೆ ಮಾಡ್ತೀನಿ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.‌

ದಿನಕ್ಕೆ 5 ಕೋಟಿ ಹಾಲು ಉತ್ಪಾದಕರಿಗೆ ಕೊಡ್ತಾ ಇದ್ದೀವಿ

ರಾಜ್ಯದಲ್ಲಿ ಪ್ರತೀ ಲೀಟರ್ ಹಾಲಿಗೆ 5 ರೂಪಾಯಿ ಸಹಾಯ ಧನ ಜಾರಿ ಮಾಡಿದ್ದು ನಾವು. ದಿನಕ್ಕೆ ರಾಜ್ಯದಲ್ಲಿ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದೆ. ಅಂದರೆ ಪ್ರತೀ ದಿನ 5 ಕೋಟಿ ರೂಪಾಯಿಯನ್ನು ಹಾಲು ಉತ್ಪಾದಕರಿಗೆ ಕೊಡುತ್ತಿದ್ದೇವೆ ಎಂದು ಲೆಕ್ಕ ವಿವರಿಸಿದರು.

ನಾವು ಒಂದು ಕಡೆ ರೈತರಿಗೆ ಶಕ್ತಿ ತುಂಬುತ್ತಿದ್ದೇವೆ. ಮತ್ತೊಂದು ಕಡೆ ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಎಸಗುತ್ತಿದೆ. ರಾಜ್ಯದ ರೈತರಿಗೆ ನಬಾರ್ಡ್ ನಿಂದ ಕೊಡುವ ಸಬ್ಸಿಡಿ ಸಾಲದ ಪ್ರಮಾಣವನ್ನು ಶೇ 58 ರಷ್ಟು ಕಡಿತಗೊಳಿಸಿದೆ. ಬರೀ ಭಾಷಣ ಮಾಡಿದರೆ ರೈತರ ಬದುಕು ಉದ್ದಾರ ಆಗಲ್ಲ ಎಂದು ಬಿಜೆಪಿಯ ಭಾಷಣದ ನೀತಿಯನ್ನು ಟೀಕಿಸಿದರು‌.

Key words: number one, country, GDP, CM Siddaramaiah