Wednesday, November 4, 2026

Dasara Wishes

Happy Dasara
Home Front Page ಆನ್‌ ಲೈನ್ ಬೆಟ್ಟಿಂಗ್ ಗೇಮ್ ಕಡಿವಾಣಕ್ಕೆ ನಿರಂತರ ಪ್ರಯತ್ನ -ಗೃಹ ಸಚಿವ ಡಾ.ಜಿ.ಪರಮೇಶ್ವರ್

ಆನ್‌ ಲೈನ್ ಬೆಟ್ಟಿಂಗ್ ಗೇಮ್ ಕಡಿವಾಣಕ್ಕೆ ನಿರಂತರ ಪ್ರಯತ್ನ -ಗೃಹ ಸಚಿವ ಡಾ.ಜಿ.ಪರಮೇಶ್ವರ್

ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಬೆಳಗಾವಿ,ಡಿಸೆಂಬರ್,12,2024 (www.justkannada.in): ಆನ್ ಲೈನ್ ಬೆಟ್ಟಿಂಗ್ ಗೇಮ್‌ ಗಳ ಸಂಸ್ಥೆಗಳ ನಿರ್ಬಂಧಕ್ಕೆ ರಾಜ್ಯ ಉಚ್ಚನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ. ನ್ಯಾಯಾಲಯ ತಡೆಯಾಜ್ಞೆ ಇದೆ ಎಂದು ಸರ್ಕಾರ ಸುಮ್ಮನೆ ಕೂತಿಲ್ಲ. ಕಾನೂನು ಪ್ರಕಾರ ನಿರಂತರವಾಗಿ ಆನ್‌ ಲೈನ್ ಬೆಟ್ಟಿಂಗ್ ಗೇಮ್ ಕಡಿವಾಣಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎಸ್.ಜೆ.ಸೋಮಶೇಖರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್‌ಲೈನ್ ಗೇಮ್‌ ಗಳ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಆನ್‌ ಲೈನ್ ಗೇಮ್ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಇದರ ತಡೆಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕಿದೆ. ಬೆಂಗಳೂರು ನಗರದಲ್ಲಿ 5 ಹಾಗೂ ವಿಜಯನಗರದಲ್ಲಿ ಒಬ್ಬರು ಆನ್‌ ಲೈನ್ ಬೆಟ್ಟಿಂಗ್ ಆಟದ ದಂಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಪ್ಟೆವೇರ್ ಉದ್ಯೋಗಿಗಳು ಇದರ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಿ ಆನ್‌ ಲೈನ್ ಗೇಮ್‌ ಗಳನ್ನು ನಿಷೇಧಿಸಬೇಕು ಎಂದರು.

Key words: curb, online betting, games – Home Minister, Dr. G. Parameshwar