Sunday, October 25, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ- ಗೃಹ ಸಚಿವ ಪರಮೇಶ್ವರ್

ಸಿಟಿ ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ ಸಿಐಡಿ ತನಿಖೆಗೆ- ಗೃಹ ಸಚಿವ ಪರಮೇಶ್ವರ್

ಸ್ಟಿಂಗ್ ಆಪರೇಷನ್ ವಿಚಾರ: ಒಳ್ಳೆಯ ಬೆಳವಣಿಗೆ ಅಲ್ಲ. ಚರ್ಚಿಸುವುದು ಸೂಕ್ತವಲ್ಲ- ಡಿಸಿಎಂ ಪರಮೇಶ್ವರ್

ಧಾರವಾಡ,ಡಿಸೆಂಬರ್,24,2024 (www.justkannada.in): ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ  ಬಗ್ಗೆ ಎಂಎಲ್ ಸಿ ಸಿ.ಟಿ ರವಿ  ಆಕ್ಷೇಪಾರ್ಹ ಪದಬಳಕೆ ಆರೋಪ  ಸಿಐಡಿ ತನಿಖೆಗೆ (CID) ವಹಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಿಟಿ ರವಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದ್ದು, ತನಿಖೆಯಿಂದ ಸತ್ಯಾಸತ್ಯತೆ ಗೊತ್ತಾಗುತ್ತದೆ. ಹೀಗಾಗಿ ಪ್ರಕರಣದ ಬಗ್ಗೆ ಹೆಚ್ಚು ವ್ಯಾಖ್ಯಾನ ಮಾಡಲ್ಲ. ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ಹೇಳಿದರು.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಸ್ಪೀಕರ್ ಅವರು ತಮ್ಮ ಕೆಲಸ ತಾವು ಮಾಡುತ್ತಾರೆ. ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ.  ಅಲ್ಲಿಯ ಸಾಧಕ ಬಾಧಕಗಳನ್ನ ನೋಡಿಕೊಂಡು ಹೇಳಿಕೆ ಕೊಟ್ಟಿರಬಹುದು.  ಕಾನೂನು ಪ್ರಕ್ರಿಯೆ ನಡೆಯುವಾಗ ಕೆಲವು ವಿಳಂಬವಾಗಬಹುದು.  ಆದರೆ ತನಿಖೆಯನ್ನ ಸರಿಯಾಗಿ ಮಾಡಬೇಕಾಗುತ್ತೆ.  ಪ್ರಕರಣದ ಸತ್ಯಾಸತ್ಯತೆ ನೋಡಬೇಕಿದೆ. ಇನ್ನು ಸಿಟಿ ರವಿ ಆ ರೀತಿ ಹೇಳಿಲ್ಲ ಅಂತಾರೆ. ಸಚಿವೆ ಹೆಬ್ಬಾಳ್ಕರ್  ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಅಂತ ಹೇಳ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದರು.

ಸಿಟಿ ರವಿ  ಮೇಲೆ ಹಲ್ಲೆ ಮಾಡಿದವರ ಮೇಲೆ ಪ್ರಕರಣ ವಿಳಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಕೆಲವೊಂದು ಕಾರಣಕ್ಕೆ ವಿಳಂಬವಾಗಿರಬಹುದು ಎಂದರು.

ಗೃಹ ಇಲಾಖೆಯಲ್ಲಿ ಹಸ್ತಕ್ಷೇಪ ಆರೋಪ ವಿಚಾರ,  ಪೊಲೀಸ್ ಇಲಾಖೆ ಜವಾಬ್ದಾರಿಯುತ ಇಲಾಖೆ.  ಸಿಎಂ ಅಥವಾ ಗೃಹ ಸಚಿವರ ಆದೇಶವನ್ನ ಮಾತ್ರ ಪೊಲೀಸರು ಪಾಲನೆ ಮಾಡುತ್ತಾರೆ. ಬೇರೆ ಯಾರೇ ಆದೇಶ ಮಾಡಿದರೂ ಅದನ್ನ ಪಾಲನೆ ಮಾಡಲ್ಲ.  ಅವರಿವರು ಆರೋಪ ಮಾಡುತ್ತಾರೆ ಅಂತಾ ನಾವು ಇಲಾಖೆ ನಡೆಸಲ್ಲ.  ಕಾನೂನು ಚೌಕಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದರು.

ಜಿ.ಪರಮೇಶ್ವರ ಅಸಮರ್ಥ ಗೃಹ ಸಚಿವ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ‌ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್,  ಪ್ರಹ್ಲಾದ್ ಜೋಶಿ ಅಸಮರ್ಥ ಕೇಂದ್ರ ಸಚಿವ ಎಂದರೆ ಒಪ್ಪಿಕೊಳ್ತಾರಾ..?  ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ. ಅದಕ್ಕೆ ಅವರು ಹಾಗೆ ಹೇಳಿದ್ದಾರೆ ಎಂದರು.

Key words: CID, investigate, CT Ravi Case, Home Minister, Parameshwar