Sunday, August 2, 2026

BDA Apartments

Home Cinema ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ನಟ ಶಿವರಾಜ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಶುಭಹಾರೈಕೆ

ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ನಟ ಶಿವರಾಜ್ ಕುಮಾರ್ ಗೆ ಸಿಎಂ ಸಿದ್ದರಾಮಯ್ಯ ಶುಭಹಾರೈಕೆ

ಬೆಂಗಳೂರು,ಡಿಸೆಂಬರ್,24,2024 (www.justkannada.in):  ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ನಟ ಶಿವರಾಜ್ ಕುಮಾರ್ ಅವರಿಗೆ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.

ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.  ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ  ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ.

ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: CM Siddaramaiah, wishes, actor, Shivarajkumar