Thursday, September 17, 2026

BDA Apartments

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಪ್ರತಿಭಟನೆ BDA JK_Adv BDA Adv
Home Front Page ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಪ್ರತಿಭಟನೆ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಪ್ರತಿಭಟನೆ

ಬೆಂಗಳೂರು,ಡಿಸೆಂಬರ್,25,2024 (www.justkannada.in):  ಬೆಂಗಳೂರಿನಲ್ಲಿ ಆರ್. ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಲಕ್ಷ್ಮೀ ದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ.

ಈ ವೇಳೆ ಶಾಸಕ ಮುನಿರತ್ನ ಅವರು ರಾಜ್ ಕುಮಾರ್ ಸಮಾಧಿ ಬಳಿ ಕುರಿತು ಪ್ರತಿಭಟನೆ ನಡೆಸಿದ್ದಾರೆ. ನಂತರ ಅವರು ಅಲ್ಲಿಂದ ತೆರಳಿದ್ದಾರೆ. ಬಳಿಕ  ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು 2ರಿಂದ 3 ಕಾರು ಜಖಂ ಆಗಿ  ಹಲವರಿಗೆ ಗಾಯ  ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೂ ಶಾಸಕ ಮುನಿರತ್ನ ಬೆಂಬಲಿಗರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಸ್ಥಳಕ್ಕೆ ನಂದಿನಿ ಲೇಔಟ್ ಠಾಣಾ ಪೊಲೀಸರು ಭೇಟಿ ನೀಡಿದ್ದು ಕೆಲವರನ್ನ ವಶಕ್ಕೆ ಪಡೆದಿದ್ದಾರೆ.

Key words: BJP, MLA ,Muniratna, throws, eggs