Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಕುಟುಂಬ ಸಮೇತ ವಿದೇಶಕ್ಕೆ ಹಾರಿದ ಡಿಸಿಎಂ ಡಿಕೆ ಶಿವಕುಮಾರ್

ಕುಟುಂಬ ಸಮೇತ ವಿದೇಶಕ್ಕೆ ಹಾರಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಡಿಸೆಂಬರ್,31,2024 (www.justkannada.in): ಹೊಸ ವರ್ಷದ ಸಂಭ್ರಮಾಚರಣೆಗೆ  ಕ್ಷಣಗಣನೆ ಆರಂಭವಾಗಿದ್ದು, 2025ನೇ ವರ್ಷವನ್ನು ಸ್ವಾಗತಿಸಲು ಇಡೀ ಪ್ರಪಂಚ ಸಜ್ಜಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಸಕಲ ಸಿದ್ಧತೆ ಮಾಡಿಕೊಂಡಿದೆ.

ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶಕ್ಕೆ ಹಾರಿದ್ದಾರೆ. ಹೌದು  ಡಿಸಿಎಂ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ವಿದೇಶದಲ್ಲಿ ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಲಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಳಿಗ್ಗೆಯೇ ಕುಟುಂಬದವರೊಂದಿಗೆ  ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ ಎನ್ನಲಾಗಿದ್ದು. ಕೆನಡಾ, ಟರ್ಕಿ ಪ್ರವಾಸ ಕೈಗೊಂಡಿದ್ದಾರೆ. ನಾಲ್ಕು ದಿನಗಳ ಕಾಲ ವಿದೇಶದಲ್ಲಿರಲಿರುವ  ಡಿಸಿಎಂ ಡಿ.ಕೆ.ಶಿವಕುಮಾರ್  ಜನವರಿ 4 ರಂದು ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

Key words: DCM, DK Shivakumar, family, abroad, New year