Sunday, September 20, 2026

BDA Apartments

ಇಂದು ಸಹ ಮೈಸೂರಿನ ಇನ್ಫೋಸಿಸ್ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ BDA JK_Adv BDA Adv
Home Front Page ಇಂದು ಸಹ ಮೈಸೂರಿನ ಇನ್ಫೋಸಿಸ್ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್

ಇಂದು ಸಹ ಮೈಸೂರಿನ ಇನ್ಫೋಸಿಸ್ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್

ಮೈಸೂರು,ಜನವರಿ,1,2025 (www.justkannada.in): ನಿನ್ನೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಚಿರತೆ ಸೆರೆಗೆ ಅರಣ್ಯಾಧಿಕಾರಿಗಳಿಂದ ಕಾರ್ಯಾಚರಣೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಇಂದು ಸಹ  ಇನ್ಫೋಸಿಸ್ ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ಘೋಷಣೆ ಮಾಡಲಾಗಿದೆ.

ಕ್ಯಾಂಪಸ್ ನಲ್ಲಿ ಚಿರತೆ ಓಡಾಟ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಸಂಸ್ಥೆಯು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಇನ್ಫೋಸಿಸ್ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ನಿನ್ನೆ ಬೆಳಗ್ಗೆ ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆಯ ಚಲನವಲನ ಕ್ಯಾಂಪಸ್ ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದು, ಸದ್ಯ ಯಾವುದೇ ಸಿಬ್ಬಂದಿಯನ್ನು ಕ್ಯಾಂಪಸ್ ಒಳಗಡೆ ಬಿಡಲಾಗುವುದಿಲ್ಲ ಎಂದು ಸಂಸ್ಥೆ ಆದೇಶ ಹೊರಡಿಸಿದೆ.

Key words: Leopard, Infosys, staff, Mysore