Friday, August 21, 2026

BDA Apartments

Home Front Page ವಿಧಾನಸಭೆ ಉಪಚುನಾವಣೆ ಬಳಿಕ ಬಿಜೆಪಿ ಸರಕಾರ ಪತನ: ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ

ವಿಧಾನಸಭೆ ಉಪಚುನಾವಣೆ ಬಳಿಕ ಬಿಜೆಪಿ ಸರಕಾರ ಪತನ: ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ

ಕಲಬುರಗಿ, ಸೆಪ್ಟೆಂಬರ್ 30, 2019 (www.justkannada.in): ರಾಜ್ಯದ 15 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಬಳಿಕ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅನರ್ಹ ಶಾಸಕರ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಠ ಹನ್ನೆರಡು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಬಿಜೆಪಿ ಸರ್ಕಾರ ಅಲ್ಪ ಬಹುಮತಕ್ಕೆ ಕುಸಿದು ಸರ್ಕಾರ ಕುಸಿಯಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರವಾಹ, ಮತ್ತೊಂದೆಡೆ ಬರ ಸ್ಥಿತಿ ಇದೆ. ಜನರು ಸಂಕಷ್ಟದಲ್ಲಿದ್ದರೂ ಕೇಂದ್ರ ಸರ್ಕಾರ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದ ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಸಹ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.