Thursday, September 17, 2026

BDA Apartments

ಬೆಂಗಳೂರಿಗರಿಗೆ ಶಾಕ್: ಶೀಘ್ರದಲ್ಲಿ ನೀರಿನ ದರ ಏರಿಕೆ BDA JK_Adv BDA Adv
Home Front Page ಬೆಂಗಳೂರಿಗರಿಗೆ ಶಾಕ್:  ಶೀಘ್ರದಲ್ಲಿ ನೀರಿನ ದರ ಏರಿಕೆ

ಬೆಂಗಳೂರಿಗರಿಗೆ ಶಾಕ್:  ಶೀಘ್ರದಲ್ಲಿ ನೀರಿನ ದರ ಏರಿಕೆ

ಬೆಂಗಳೂರು,ಜನವರಿ,28,2025 (www.justkannada.in): ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರಿನ ಜನತೆಗೆ ಇದೀಗ ನೀರಿನ ದರ ಏರಿಕೆ ಬಿಸಿಯೂ ತಟ್ಟಲಿದೆ. ಶೀಘ್ರದಲ್ಲೇ ನೀರಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ.ಬೆಂಗಳೂರಿಗರಿಗೆ ಶಾಕ್ nypunya1

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ , ನೀರಿನ ಬಿಲ್ ಹೆಚ್ಚಳ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಕುಡಿಯುವ ನೀರಿನ ಬೆಲೆ ಹೆಚ್ಚಳದ ಬಗ್ಗೆ ವರದಿ ನೀಡಲು ಸೂಚನೆ ನೀಡಲಾಗಿದೆ. ವರದಿ ನೀಡಿದ ತಕ್ಷಣ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಕಾವೇರಿ ಭವನದಲ್ಲಿ ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್‌ಎಸ್ ಬಿ, ಬಿಎಂ ಆರ್ ಡಿ ಎ ಅಧಿಕಾರಿಗಳ ಜತೆ ಸಭೆ ನಡೆಸಿ ಮಾತನಾಡಿದ  ಡಿಸಿಎಂ ಡಿಕೆ ಶಿವಕುಮಾರ್, ನೀರಿನ ಅಕ್ರಮ ಸಂಪರ್ಕಗಳ ಸಕ್ರಮೀಕರಣ, ನೀರಿನ ಸಂಪರ್ಕ ಹಾಗೂ ಬಳಕೆಯ ನಿಖರವಾದ ಲೆಕ್ಕವನ್ನು ಪಡೆಯಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ನೀರಿನ ಬಿಲ್ ಹೆಚ್ಚಳ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಕಾರಣಕ್ಕೆ ನಗರದ ಎಲ್ಲಾ ಶಾಸಕರ ಬಳಿ ಹೋಗಿ ಮಂಡಳಿಯವರು ಚರ್ಚೆ ನಡೆಸಿದ್ದಾರೆ. ಅಲ್ಲದೇ ನೀರಿನ ಜಾಲ ವಿಸ್ತರಣೆ ಮಾಡುವ ಸಲುವಾಗಿ ಅನೇಕ ಬ್ಯಾಂಕ್ ಗಳ ಬಳಿ ಸಾಲ ಕೇಳಲೂ ಆಗುತ್ತಿಲ್ಲ. ಬ್ಯಾಂಕ್ ಅವರು ಮಂಡಳಿ ನಷ್ಟದಲ್ಲಿದೆ ನಾವು ಸಹಾಯ ಮಾಡಲು ಆಗುವುದಿಲ್ಲ ಎನ್ನುತ್ತಿದ್ದಾರೆ ಎಂದರು.

2014 ರಿಂದ ಇಲ್ಲಿಯ ತನಕ ಅಂದರೆ 11 ವರ್ಷಗಳ ಕಾಲ ನಗರದಲ್ಲಿ ನೀರಿನ ಬಿಲ್  ಹೆಚ್ಚಳ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಬಿಡಬ್ಲ್ಯುಎಸ್‌ಎಸ್ ಬಿಗೆ ವರ್ಷಕ್ಕೆ 1 ಸಾವಿರ ಕೋಟಿ ನಷ್ಟವಾಗುತ್ತಿದೆ. ವಿದ್ಯುತ್ ಬಿಲ್ ಈ ಹಿಂದೆ 35 ಕೋಟಿಯಾಗುತ್ತಿತ್ತು. ಈ ಬಾರಿ 75 ಕೋಟಿಯಾಗಿದೆ. ಇತರೇ ಸೇವೆಗಳು, ಮಾನವ ಸಂಪನ್ಮೂಲ ವೆಚ್ಚ ಸೇರಿದಂತೆ ತಿಂಗಳಿಗೆ 85 ಕೋಟಿ ಹಣ ನಷ್ಟವಾಗುತ್ತಿದೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

Key words: Shock,  Bengaluru people, Water rates, increase