Sunday, September 20, 2026

BDA Apartments

Home Front Page ಇನ್ವೆಸ್ಟ್‌ ಕರ್ನಾಟಕದಲ್ಲಿ 21 ಪ್ರಮುಖ ಹೂಡಿಕೆ ಯೋಜನೆಗಳು ಪ್ರಕಟ: ವಿವರ ಇಲ್ಲಿದೆ..

ಇನ್ವೆಸ್ಟ್‌ ಕರ್ನಾಟಕದಲ್ಲಿ 21 ಪ್ರಮುಖ ಹೂಡಿಕೆ ಯೋಜನೆಗಳು ಪ್ರಕಟ: ವಿವರ ಇಲ್ಲಿದೆ..

ಬೆಂಗಳೂರು, ಫೆಬ್ರುವರಿ 12, 2025 (www.justkannada.in):   ನಿನ್ನೆಯಿಂದ ಆರಂಭವಾಗಿರುವ ಇನ್ವೆಸ್ಟ್‌ ಕರ್ನಾಟಕ 2025ರಲ್ಲಿ 21 ಪ್ರಮುಖ ಹೂಡಿಕೆ ಯೋಜನೆಗಳನ್ನು ಪ್ರಕಟಿಸಲಾಗಿದೆ.ಇನ್ವೆಸ್ಟ್‌ ಕರ್ನಾಟಕದಲ್ಲಿ 21 ಪ್ರಮುಖ ಹೂಡಿಕೆ ಯೋಜನೆಗಳು ಪ್ರಕಟ nypunya1

ನಿನ್ನೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಚಾಲನೆ ನೀಡಿದ್ದು ಫೆಬ್ರವರಿ 14ರವರೆಗೆ ಸಮಾವೇಶ ನಡೆಯಲಿದೆ. ಈ ನಡುವೆ ಇನ್ವೆಸ್ಟ್‌ ಕರ್ನಾಟಕ 2025- ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪ್ರಕಟಿಸಲಾಗಿರುವ 20 ಪ್ರಮುಖ ಹೂಡಿಕೆ ಯೋಜನೆಗಳ ವಿವರ ಹೀಗಿದೆ.

1.ಜೆಎಸ್‌ಡಬ್ಲ್ಯು ನಿಯೊ ಎನರ್ಜಿ ಲಿಮಿಟೆಡ್ – ಸೌರ ಯೋಜನೆ , ಗಾಳಿ ಶಕ್ತಿ  ಯೋಜನೆಗಳು, ಬ್ಯಾಟರಿ ಶಕ್ತಿ ಸಂಗ್ರಹಣೆ, ಬ್ಲೇಡ್ ತಯಾರಿಕೆ ಮತ್ತು ವಿಂಡ್ ಟರ್ಬೈನ್ ಜನರೇಟರ್ ಸ್ಥಾವರ ಸ್ಥಾಪನೆಗೆ ₹ 56,000 ಕೋಟಿ   ಹೂಡಿಕೆ.

  1. ಬಲ್ಡೋಟಾ ಸ್ಟೀಲ್ ಆ್ಯಂಡ್‌ ಪವರ್ ಲಿಮಿಟೆಡ್ – ಸಮಗ್ರ ಉಕ್ಕು  ತಯಾರಿಕಾ ಸ್ಥಾವರಕ್ಕೆ ರೂ ₹ 54,000 ಕೋಟಿ   ಹೂಡಿಕೆ. 3. ಟಾಟಾ ಪವರ್ ರಿನ್ಯೂವೇಬಲ್‌ ಎನರ್ಜಿ ಲಿಮಿಟೆಡ್ – ರಾಜ್ಯದಾದ್ಯಂತ ನವೀಕರಿಸಬಹುದಾದ ಇಂಧನ ವಿದ್ಯುತ್ ಯೋಜನೆಗಳು ಮತ್ತು ಮೇಲ್ಚಾವಣಿ ವಿದ್ಯುತ್‌ ಪರಿಹಾರಗಳ ಅಭಿವೃದ್ಧಿಗೆ ₹ 50,000 ಕೋಟಿ   ಹೂಡಿಕೆ.
  2. ರೆನ್ಯೂ ಪ್ರೈವೇಟ್‌ ಲಿಮಿಟೆಡ್ – 4ಗಿಗಾವಾಟ್‌ ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಸ್ಥಾಪಿಸಲು ₹ 50,000 ಕೋಟಿ ಹೂಡಿಕೆ.
  3. ಸೆರೆಂಟಿಕಾ ರಿನ್ಯೂವೇಬಲ್ಸ್ ಇಂಡಿಯಾ ಪ್ರೈವೇಟ್‌ ಲಿಮಿಟೆಡ್ – ನವೀಕರಿಸಬಹುದಾದ ಇಂಧನ ಯೋಜನೆಗಳ ಅಭಿವೃದ್ಧಿಗಾಗಿ ₹43,975 ಕೋಟಿ ಹೂಡಿಕೆ.
  4. ಜೆಎಸ್‌ಡಬ್ಲ್ಯು ಗ್ರೂಪ್ – ಜೆಎಸ್‌ ಡಬ್ಲ್ಯು ಸಿಮೆಂಟ್ ಆ್ಯಂಡ್‌ ಸ್ಟೀಲ್ ಮತ್ತು ಅದರ ಅಂಗಸಂಸ್ಥೆಗಳಿಗೆ ₹ 43,900 ಕೋಟಿ ಹೂಡಿಕೆ.
  5. ಮಹೀಂದ್ರಾ ಸಸ್ಟೆನ್ ಪ್ರೈವೇಟ್ ಲಿಮಿಟೆಡ್ – ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಸ್ಥಾಪಿಸಲು ₹ 35,000 ಕೋಟಿ ಹೂಡಿಕೆ
  6. ಹೀರೋ ಫ್ಯೂಚರ್ ಎನರ್ಜಿಸ್ – ನವೀಕರಿಸಬಹುದಾದ ಇಂಧನ, ಪರಿಶುದ್ಧ ಜಲಜನಕ ಮತ್ತು ಅದರ ಉತ್ಪನ್ನಗಳ ಯೋಜನೆಗಳಿಗೆ ₹ 22,200 ಕೋಟಿ ಹೂಡಿಕೆ
  7. ಸುಜ್ಲಾನ್ ಎನರ್ಜಿ ಲಿಮಿಟೆಡ್ – ಪವನ ವಿದ್ಯುತ್ ಯೋಜನೆಗಳಿಗೆ ₹ 21,950 ಕೋಟಿ ಹೂಡಿಕೆ.
  8. ಎಸ್ಸಾರ್ ರಿನ್ಯೂವೇಬಲ್ಸ್‌ ಲಿಮಿಟೆಡ್‌- ₹ 20,000 ಕೋಟಿ ಹೂಡಿಕೆ.
  9. ಅವಾಡಾ ಎನರ್ಜಿ ಪ್ರೈವೇಟ್ ಲಿಮಿಟೆಡ್ – ₹ 18,000 ಕೋಟಿ ಹೂಡಿಕೆ.
  10. ಎಪ್ಸಿಲಾನ್ ಗ್ರೂಪ್ – ಆನೋಡ್ ಮತ್ತು ಕ್ಯಾಥೋಡ್ ಪದಾರ್ಥಗಳ ತಯಾರಿಕೆಗೆ ₹ 15,350 ಕೋಟಿ ಹೂಡಿಕೆ.
  11. ಎಂವೀ ಎನರ್ಜಿ ಪ್ರೈವೇಟ್ ಲಿಮಿಟೆಡ್ – ಸೋಲಾರ ಫೊಟೊವೊಲ್ಟ್ಯಾಕ್‌ ಸೆಲ್ಸ್‌ ಮತ್ತು ಮಾಡ್ಯೂಲ್‌ ಗಳ ತಯಾರಿಕೆಗೆ ₹ 15,000 ಕೋಟಿ ಹೂಡಿಕೆ.
  12. ಲ್ಯಾಮ್ ರಿಸರ್ಚ್ – ಸೆಮಿಕಂಡಕ್ಟರ್‌ ಉಪಕರಣಗಳ ತಯಾರಿಕೆಗೆ ₹ 10,000 ಕೋಟಿ ಹೂಡಿಕೆ
  13. ಆಂಪಿನ್‌ ಎನರ್ಜಿ ಟ್ರಾನ್ಸಿಷನ್ ಪ್ರೈವೇಟ್ ಲಿಮಿಟೆಡ್ – ₹10,000 ಕೋಟಿ ಹೂಡಿಕೆ.
  14. ಎಸಿಎಂಇ ಸೋಲಾರ್ ಹೋಲ್ಡಿಂಗ್ಸ್ ಲಿಮಿಟೆಡ್ – ₹ 10,000 ಕೋಟಿ ಹೂಡಿಕೆ
  15. ಔ2 ಪವರ್ ಪ್ರೈವೇಟ್‌ ಲಿಮಿಟೆಡ್ – ನವೀಕರಿಸಬಹುದಾದ ಇಂಧನ ಸೌರ ಮತ್ತು ಪವನ ಯೋಜನೆಗಳ ಸ್ಥಾಪನೆಗೆ ₹ 10,000 ಕೋಟಿ ಹೂಡಿಕೆ
  16. ಕಾಂಟಿನುಮ್‌ ಗ್ರೀನ್ ಎನರ್ಜಿ ಜಿಪಿ – ನವೀಕರಿಸಬಹುದಾದ ಇಂಧನ ಯೋಜನೆಗಳನ್ನು ಅಭಿವೃದ್ಧಿಪಡಿಸಲು ₹ 10,000 ಕೋಟಿ ಹೂಡಿಕೆ
  17. ಸೋಟೆಫಿನ್ ಭಾರತ್ – ಸಂಪೂರ್ಣ ಸ್ವಯಂಚಾಲಿತ ರೊಬೊಟಿಕ್ ಬಹುಮಹಡಿ ಕಾರ್ ಮತ್ತು ಬಸ್ ಪಾರ್ಕಿಂಗ್ ವ್ಯವಸ್ಥೆಗಳ ನಿರ್ಮಾಣ ಮತ್ತು ಸ್ಥಾಪನೆಗೆ ₹ 8,500 ಕೋಟಿ ಹೂಡಿಕೆ
  18. ಶ್ರೀ ಸಿಮೆಂಟ್ ಲಿಮಿಟೆಡ್ – ಇಂಟೆಗ್ರೇಟೆಡ್‌ ಸ್ಥಾವರ ಮತ್ತು ಕ್ಲಿಂಕರ್ ಗ್ರೈಂಡಿಂಗ್ ಘಟಕಕ್ಕೆ ₹ 8,350 ಕೋಟಿ ಹೂಡಿಕೆ
  19. ಹೆಕ್ಸಾ ಕ್ಲೈಮೇಟ್ ಸೊಲ್ಯೂಷನ್ಸ್ ಪ್ರೈ. ಲಿಮಿಟೆಡ್ – ₹ 8,000 ಕೋಟಿ ಹೂಡಿಕೆ

Key words: 21 investment projects, announced, Invest Karnataka