Sunday, September 20, 2026

BDA Apartments

Home Front Page ‘ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’

‘ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ, ಸಂಶೋಧನೆಯೇ ಆಧಾರ’

'Quality education, research are the basis for semiconductor profits' "We are only talking about attracting investment for all industrial sectors, including the semiconductor sector. But, in reality, we need to create both talent and potential. If this is possible, the flow of capital will happen automatically.'

 

'ಸೆಮಿಕಂಡಕ್ಟರ್ ಲಾಭ ನಮ್ಮದಾಗಲು ಗುಣಮಟ್ಟದ ಶಿಕ್ಷಣ TOP-BANNER-01 TOP BANNER 01

ಬೆಂಗಳೂರು, ಫೆ.೧೨, ೨೦೨೫: `ನಾವು ಸೆಮಿಕಂಡಕ್ಟರ್ ಕ್ಷೇತ್ರದ ಸಹಿತ ಎಲ್ಲಾ ಕೈಗಾರಿಕಾ ವಲಯಗಳಿಗೆ ಸಂಬಂಧಿಸಿದಂತೆ  ಬರೀ ಬಂಡವಾಳ ಆಕರ್ಷಿಸುವ ಬಗ್ಗೆ ಮಾತನಾಡುತ್ತಿರುತ್ತೇವೆ. ಆದರೆ, ವಾಸ್ತವವಾಗಿ ನಾವು ಪ್ರತಿಭೆ ಮತ್ತು ಸಾಮರ್ಥ್ಯ ಎರಡನ್ನೂ ಸೃಷ್ಟಿಸುವ ಜರೂರಿದೆ. ಇದು ಸಾಧ್ಯವಾದರೆ, ಬಂಡವಾಳದ ಹರಿವು ತನ್ನಿಂತಾನೇ ಆಗುತ್ತದೆ.’

ಇದು ಜಾಗತಿಕ ಹೂಡಿಕದಾರರ ಸಮಾವೇಶದಲ್ಲಿ ಬುಧವಾರ ನಡೆದ `ಸೆಮಿಕಂಡಕ್ಟರ್ ಕ್ರಾಂತಿಯಲ್ಲಿ ಭಾರತದ ನಾಯಕತ್ವದ ಸರದಿ’ ಕುರಿತು ನಡೆದ ಗೋಷ್ಠಿಯಲ್ಲಿ ಮಾತನಾಡಿದ ಉದ್ಯಮ ಪರಿಣತರಾದ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಿಇಒ ಸಂತೋಷಕುಮಾರ್, ಎನ್ಎಕ್ಸ್ ಪಿ ಸೆಮಿಕಂಡಕ್ಟರ್ಸ್ ಉಪಾಧ್ಯಕ್ಷ ಹಿತೇಂದ್ರ ಗಾರ್ಗ್ ಮತ್ತು ಗ್ಲೋಬಲ್ ಫ್ಯಾಬ್ ಎಂಜಿನಿಯರಿಂಗ್ ಸೊಲ್ಯೂಷನ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಜಿತೇಂದ್ರ ಛಡ್ಡಾ ಒಕ್ಕೊರಲಿನಿಂದ ವ್ಯಕ್ತಪಡಿಸಿದ ಕಳಕಳಿಯಾಗಿತ್ತು.

ಮೊದಲಿಗೆ ಮಾತನಾಡಿದ ಸಂತೋಷಕುಮಾರ್, `ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಮುಂದಿನ ಹತ್ತು ವರ್ಷಗಳು ಭಾರತದ್ದಾಗಿವೆ. ಈ ಅವಧಿಯಲ್ಲಿ ಈ ಕ್ಷೇತ್ರದ ಈಗಿನ 40 ಬಿಲಿಯನ್ ಡಾಲರ್ ವಹಿವಾಟು 400 ಬಿಲಿಯನ್ ಡಾಲರ್ ಮೀರಲಿದೆ. ಆದರೆ, ನಮ್ಮ ಶಿಕ್ಷಣ ರಂಗದಲ್ಲಿ ಗುಣಮಟ್ಟದ ಬೋಧಕರು, ಸಂಶೋಧನೆ ಮತ್ತು ಪ್ರಾಯೋಗಿಕ ಕಲಿಕೆ ಮೂರರ ಕಡೆಗೂ ಆದ್ಯ ಗಮನ ಕೊಡಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಸರಕಾರವು ರಾಷ್ಟ್ರೀಯ ಸಮಸ್ಯೆಗಳನ್ನು ಮುಂದಿಟ್ಟು, ಅವುಗಳಿಗೆ ದಕ್ಷ ಪರಿಹಾರ ಕಂಡುಹಿಡಿಯುವಂತಹ ಸಂಶೋಧನಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಬೇಕಾದ ಜರೂರಿದೆ’ ಎಂದು ವಾಸ್ತವ ಪರಿಸ್ಥಿತಿಯತ್ತ ಗಮನ ಸೆಳೆದರು.

ಸಂಶೋಧನೆಯೇ ಆಧಾರ’ VTU TOP BANNER 04

ದೇಶವನ್ನು ಇನ್ನು ಕೆಲವೇ ವರ್ಷಗಳಲ್ಲಿ 5 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯಾಗಿ ಬೆಳೆಸುವ ಗುರಿ ನಮ್ಮ ಮುಂದಿದೆ. ಇದರಲ್ಲಿ 3 ಟ್ರಿಲಿಯನ್ ಡಾಲರ್ ಇಎಸ್ಡಿಎಂ ವಲಯದ ಕೊಡುಗೆಯೇ ಆಗಿರಲಿದೆ. ಆದರೆ, ಅವಕಾಶಗಳು ಕೇವಲ ಭಾರತಕ್ಕೆ ಮಾತ್ರ ಇರುವುದಿಲ್ಲ. ಬದಲಿಗೆ ಅವು ಎಲ್ಲ ದೇಶಗಳಿಗೂ ಲಭ್ಯವಿರುತ್ತವೆ. ಅವು ನಮ್ಮದಾಗಬೇಕೆಂದರೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯ ಕಡೆಗೆ ಗಮನ ಕೊಡಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

ಜಿತೇಂದ್ರ ಛಡ್ಡಾ ಮಾತನಾಡಿ, ಸೆಮಿಕಂಡಕ್ಟರ್ ಕ್ಷೇತ್ರದ ಚಿಪ್ ವಿನ್ಯಾಸದಲ್ಲಿ ಭಾರತದ ಪಾಲು ಶೇಕಡ 25ರಷ್ಟಿದೆ. ಆದರೆ, ಉತ್ಪಾದನೆಯಲ್ಲಿ ನಾವು ಹಿಂದಿದ್ದೇವೆ. ಇನ್ನು 5-10 ವರ್ಷಗಳಲ್ಲಿ ಕೃತಕ ಬುದ್ಧಿಮತ್ತೆ ಎಲ್ಲ ಕ್ಷೇತ್ರಗಳನ್ನೂ ಆವರಿಸಿಕೊಳ್ಳಲಿದೆ. ಆಗ 15-20 ಮಿಲಿಯನ್ ಡಾಲರ್ ಹೂಡಿಕೆಯಲ್ಲಿ `ಪರ್ಸನಲ್ ಡಿಸೈನ್’ ಪರಿಣತಿಯು ಮುನ್ನೆಲೆಗೆ ಬರಲಿದೆ. ಜಗತ್ತಿನ ದೊಡ್ಡದೊಡ್ಡ ಆರ್ಥಿಕತೆಗಳೆಲ್ಲವೂ ಸೆಮಿಕಂಡಕ್ಟರ್ ಕ್ಷೇತ್ರವನ್ನೇ ನೆಚ್ಚಿಕೊಂಡಿವೆ. ಈಗ ತೈವಾನ್ ಮತ್ತು ಜಪಾನಿನಲ್ಲಿ ಸೆಮಿಕಂಡಕ್ಟರ್ ಚಿಪ್ ಉತ್ಪಾದನೆ ಸಮೃದ್ಧವಾಗಿದೆ. ನಮ್ಮಲ್ಲಿನ್ನೂ ಸೆಮಿಕಂಡಕ್ಟರ್ ವಲಯಕ್ಕೆ ಇಂಬು ಕೊಡುವಂತಹ ಕಾರ್ಯ ಪರಿಸರ ಪೂರ್ಣ ಪ್ರಮಾಣದಲ್ಲಿ ಸೃಷ್ಟಿಯಾಗಿಲ್ಲ ಎಂದು ಅಭಿಪ್ರಾಯಪಟ್ಟರು.

ಹಿತೇಶ್ ಗಾರ್ಗ್ ಮಾತನಾಡಿ, `20 ವರ್ಷಗಳ ಹಿಂದೆ ನಮ್ಮಲ್ಲಿ ಎನ್.ಎಫ್.ಸಿ.(ನಿಯರ್ ಫೀಲ್ಡ್ ಕಮ್ಯುನಿಕೇಶನ್) ತಂತ್ರಜ್ಞಾನ ಬಂದಾಗ ಅದಕ್ಕೆ ಬಳಕೆದಾರರೇ ಇರಲಿಲ್ಲ. ಇದಕ್ಕಾಗಿ ನಾವು ಹತ್ತು ವರ್ಷ ಕಾಯಬೇಕಾಯಿತು. ಆದರೆ ಈಗ ಬೆಂಗಳೂರಿನಲ್ಲೇ ನ್ಯಾನೊ ಮೀಟರ್ ಲೆಕ್ಕದಲ್ಲಿ ಚಿಪ್ ವಿನ್ಯಾಸಗಳು ಸಿದ್ಧವಾಗುತ್ತಿವೆ. ಇದೇ ತಂತ್ರಜ್ಞಾನದ ಶಕ್ತಿ. ಕರ್ನಾಟಕದ ವಿಶ್ವವಿದ್ಯಾಲಯಗಳು, ಕಾಲೇಜು ಮತ್ತು ನವೋದ್ಯಮಗಳಲ್ಲಿ ಸೆಮಿಕಂಡಕ್ಟರ್ ಕ್ಷೇತ್ರದ ಬೆಳವಣಿಗೆಗೆ ಅಪಾರ ಅವಕಾಶಗಳಿವೆ ಎಂದು ನುಡಿದರು.

quality education research semiconductors

ಭಾರತ ಮತ್ತು ಅದರಲ್ಲೂ ಕರ್ನಾಟಕ ಸಾಫ್ಟ್ವೇರ್ ಆಡುಂಬೊಲಗಳಾಗಿವೆ. ಬೆಂಗಳೂರಿನಲ್ಲಂತೂ ಎಲೆಕ್ಟ್ರಾನಿಕ್ಸ್ ವಲಯದಲ್ಲಿ ತುಂಬಾ ಸಂಶೋಧನೆಗಳು ನಡೆಯುತ್ತಿವೆ. ಆದರೆ ಇವುಗಳಿಗೆ ತಕ್ಕಂತಹ ಮಾರುಕಟ್ಟೆಯನ್ನು ಸೃಷ್ಟಿಸುವ ಅನ್ವಯಿಕತೆಯ ಕೊರತೆ ನಮ್ಮಲ್ಲಿ ಕಾಣುತ್ತಿದೆ. ಇದರ ಜೊತೆಗೆ ಹೆಚ್ಚುಹೆಚ್ಚು ಸಹಭಾಗಿತ್ವಕ್ಕೆ ಉತ್ತೇಜನ ಸಿಗುವಂತಾಗಬೇಕು. ಇದಿಲ್ಲದೆ ಹೋದರೆ, ಉದ್ಯಮದ ಬೆಳವಣಿಗೆ ಕುಂಟುತ್ತ ಸಾಗುತ್ತದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಲ್ಯಾಮ್ ರೀಸರ್ಚ್ ಉನ್ನತಾಧಿಕಾರಿ ರಂಗೇಶ್ ಗೋಷ್ಠಿಯನ್ನು ನಿರ್ವಹಿಸಿದರು

key words: ‘Quality education, research, semiconductor, profits,GIM

SUMMARY:

‘Quality education, research are the basis for semiconductor profits’

ಅವಕ ಶಗಳ semiconductors-new semiconductors new

“We are only talking about attracting investment for all industrial sectors, including the semiconductor sector. But, in reality, we need to create both talent and potential. If this is possible, the flow of capital will happen automatically.’

quality education nypunya1