Sunday, September 6, 2026

BDA Apartments

Home Front Page ನೆರೆ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಬಿಎಸ್ ವೈ ಕಾರಿಗೆ ಮುತ್ತಿಗೆ ಹಾಕಿ ರೈತರಿಂದ ಆಕ್ರೋಶ…..

ನೆರೆ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಬಿಎಸ್ ವೈ ಕಾರಿಗೆ ಮುತ್ತಿಗೆ ಹಾಕಿ ರೈತರಿಂದ ಆಕ್ರೋಶ…..

ಬೆಳಗಾವಿ,ಅ,4,2019(www.justkannada.in):  ಒಂದೆಡೆ ರಾಜ್ಯದ ನೆರೆ ಪರಿಹಾರದ ಪ್ರಸ್ತಾವನೆಯನ್ನ ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಇನ್ನೊಂದೆಡೆ ನೆರೆ ಪರಿಹಾರಕ್ಕಾಗಿ ರೈತರು ಸಿಎಂ ಬಿಎಸ್ ಯಡಿಯೂರಪ್ಪಗೆ ಘೇರಾವ್ ಹಾಕಲು ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ನೆರೆ ಪೀಡಿತ ಪ್ರದೇಶಗಳಿಗೆ ಪ್ರವಾಸ ಕೈಗೊಂಡಿರುವ ಸಿಎಂ ಬಿಎಸ್ ಯಡಿಯೂರಪ್ಪಗೆ ಇಂದು ಬೆಳಗಾವಿಯ  ಅತಿಥಿಗೃಹದ ಗೇಟ್ ಬಳಿ ರೈತರು ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ರೈತ ಮಹಿಳೆ ಜಯಶ್ರೀ ಎಂಬುವವರು ರಸ್ತೆ ಮೇಲೆಯೇ ಮಲಗಿ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನ ಪೊಲೀಸರು ಹೊರ ಹಾಕಿದರು. ಸಿಎಂ ಬಿಎಸ್ ಯಡಿಯೂರಪ್ಪ ಹೋದ ಬಳಿಕ ಸಿಎಂಗೆ ಧಿಕ್ಕಾರ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಈ ಸಮಯದಲ್ಲಿ ಪೊಲೀಸರು ರೈತರನ್ನ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Key words: belagavi-Farmers-attempt – Gherav – CM BS yeddyurappa- flood relief