Friday, September 18, 2026

BDA Apartments

SUMMER EFFECT : ನೀರು ಬಳಕೆಗೆ ನಿರ್ಬಂಧ ಹೇರಿದ BWSSB..! BDA JK_Adv BDA Adv
Home Front Page SUMMER EFFECT : ನೀರು ಬಳಕೆಗೆ ನಿರ್ಬಂಧ ಹೇರಿದ BWSSB..!

SUMMER EFFECT : ನೀರು ಬಳಕೆಗೆ ನಿರ್ಬಂಧ ಹೇರಿದ BWSSB..!

ಬೆಂಗಳೂರು,ಫೆಬ್ರವರಿ,18,2025 (www.justkannada.in):  ಚಳಿಗಾಲ ಮುಗಿದು ಇನ್ನೇನು ಬೇಸಿಗೆ ಕಾಲ ಶುರುವಾಗಲಿದ್ದು  ಈ ಹಿನ್ನೆಲೆಯಲ್ಲಿ  ಕುಡಿಯುವ ನೀರನ್ನ ಅನಗತ್ಯವಾಗಿ ಪೋಲು ಮಾಡುವುದನ್ನ ತಡೆಗಟ್ಟಲು ಮುಂದಾಗಿರುವ ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ ಇದೀಗ ನೀರು ಬಳಕೆಗೆ ಕೆಲ ನಿರ್ಬಂಧಗಳನ್ನ ವಿಧಿಸಿದೆ.SUMMER EFFECT nypunya1

ಈ ಕುರಿತು ಆದೇಶ ಹೊರಡಿಸಿರುವ ಬಿಡಬ್ಲ್ಯೂ ಎಸ್ ಎಸ್ ಬಿ,   ಬೆಂಗಳೂರು ಮಹಾನಗರದಲ್ಲಿ ಖಾಯಂ ವಾಸಿಗಳು ಹಾಗೂ ಬಂದು ಹೋಗುವವರನ್ನು ಸೇರಿಸಿ ಸುಮಾರು 1 ಕೋಟಿ 40 ಲಕ್ಷ ಜನಸಂಖ್ಯೆಯನ್ನು ಗುರುತಿಸಲಾಗಿದೆ. ಎಲ್ಲರಿಗೂ ಕುಡಿಯುವ ನೀರನ್ನು ಪೂರೈಕೆ ಮಾಡುವುದು ಅವಶ್ಯವಾಗಿರುತ್ತದೆ. ಪ್ರಸ್ತುತ ನಗರದಲ್ಲಿ ಪ್ರತಿದಿನ ಉಷ್ಣಾಂಶ ಏರುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಮಳೆಯ ಕೊರತೆಯಿಂದ ಅಂತರ್ಜಲ ಕುಸಿದಿದ್ದು, ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟಲು ಅವಶ್ಯವೆಂದು ಮನಗಂಡು ಕುಡಿಯುವ ನೀರನ್ನು ಸಾರ್ವಜನಿಕರು ಮಿತವಾಗಿ ಬಳಸುವಂತೆ ಅಗತ್ಯಪಡಿಸಲಾಗಿದೆ.  ಈ ಹಿನ್ನಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ   ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34 ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು, ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಬಳಕೆ ಮಾಡದಂತೆ ನಿರ್ಬಂಧಿಸಲಾಗಿದೆ ಎಂದು ತಿಳಿಸಿದೆ.

ಹಾಗೆಯೇ ಈ ನಿಷೇಧ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ರೂ. 5000/- ಗಳ ದಂಡ ವಿಧಿಸಲಾಗುವುದು. ಈ ಉಲ್ಲಂಘನೆಯು ಮರುಕಳಿಸಿದಲ್ಲಿ ದಂಡ ಮೊತ್ತ ರೂ.5000/- ಜೊತೆಗೆ ಹೆಚ್ಚುವರಿಯಾಗಿ ರೂ.500/-ಪ್ರತಿದಿನದಂತೆ ದಂಡ ಹಾಕಲಾಗುವುದು.

ಸಾರ್ವಜನಿಕರು ಮೇಲ್ಕಂಡ ನಿಷೇಧಗಳನ್ನು ಯಾರಾದರು ಉಲ್ಲಂಘನೆ ಮಾಡುವದು ಕಂಡುಬಂದಲ್ಲಿ ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ : 1916 ಗೆ ತಿಳಿಸಬಹುದಾಗಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

Key words: BWSSB, imposes, restrictions , water consumption