Wednesday, September 30, 2026

BDA Apartments

Home Crime ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರ ನೋಟೀಸ್..!

ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರ ನೋಟೀಸ್..!

ಮೈಸೂರು,ಫೆಬ್ರವರಿ,19,2025 (www.justkannada.in):  ರಾಜ್ಯದಲ್ಲಿ ಭಾರಿ ಚರ್ಚಿತವಾಗಿದ್ದ ಮುಡಾ ಹಗರಣ ವಿಚಾರಕ್ಕೆ ಟ್ವಿಸ್ಟ್ ಸಿಕ್ಕಿದ್ದು ಸಾಕ್ಷ್ಯಾಧಾರಗಳ ಕೊರತೆ  ಎಂದು  ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ.ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರ ನೋಟೀಸ್..! nypunya1

ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದು, ನೀವು ನೀಡಿದ ದೂರು ಸಂಬಂಧ 1ನೇ ಆರೋಪಿಯಿಂದ 4ನೇ ಆರೋಪಿವರೆಗೆ ವಿಚಾರಣೆ ನಡೆಸಲಾಗಿದೆ. ಇದು ಸಿವಿಲ್ ಸ್ವರೂಪ್ಪದ್ದಾಗಿದೆ. ಹಾಗೆಯೇ ಈ ಪ್ರಕರಣ ತನಿಖೆ ನಡೆಸಲು ತಕ್ಕುದಲ್ಲ, ಅಲ್ಲದೆ ದೂರಿನಲ್ಲಿ ವಜಾ ಮಾಡಿದ ಪ್ರಕರಣಗಳು ಸಹ ಇದೆ . ಜೊತೆಗೆ ಸಾಕಷ್ಟು ಸಾಕ್ಷ್ಯಾಧಾರಗಳ ಕೊರೆತೆಯಿದೆ. ಎಲ್ಲಾ ಆರೋಪಿಗಳ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪ ಸಾಬೀತಾಗಿಲ್ಲ ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತರ ನೋಟೀಸ್..! snehamayi

ಹಾಗೆಯೇ ಈ ವರದಿಯನ್ನು ವಿರೋಧಿಸುವುದಿದ್ದರೆ, ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟರ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ಆರೋಪಿ-1 ರಿಂದ ಆರೋಪಿ-4 ರವರೆಗಿನ ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲವಾದ್ದರಿಂದ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ.  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016ನೇ ಸಾಲಿನಿಂದ 2024ನೇ ಸಾಲಿನವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿ.ಆರ್.ಪಿ.ಸಿ ರೀತ್ಯಾ ಹೆಚ್ಚುವರಿ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ನೋಟಿಸ್ ನಲ್ಲಿ ಎಸ್ಪಿ ಉದೇಶ್ ತಿಳಿಸಿದ್ದಾರೆ.

Key words: Muda case,  Lokayukta, notice , Snehamayi Krishna.