Saturday, September 5, 2026

BDA Apartments

Home Crime ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್: ಇಡಿ ಸಮನ್ಸ್...

ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ಬಿಗ್ ರಿಲೀಫ್: ಇಡಿ ಸಮನ್ಸ್ ರದ್ದು

ಬೆಂಗಳೂರು,ಮಾರ್ಚ್,7,2025 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಸಮನ್ಸ್ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸಮನ್ಸ್ ರದ್ದು ಮಾಡಿ ಆದೇಶ ಹೊರಡಿಸಿದೆ.

ಮುಡಾ ಕೇಸ್ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತದಿಂದಲೂ ಕ್ಲೀನ್ ಚಿಟ್  ಸಿಕ್ಕಿದೆ. ಇನ್ನು ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯೂ ವಜಾಗೊಂಡಿತ್ತು. ಈಗ ಹೈಕೋರ್ಟ್ ಇಡಿ ಸಮನ್ಸ್ ರದ್ದು ಮಾಡಿದೆ.

Key words: muda case, CM wife, Parvati, Minister, Bhairati Suresh, ED summons