Sunday, August 2, 2026

BDA Apartments

Home Cinema ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : 2ನೇ ಆರೋಪಿಯ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ...

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : 2ನೇ ಆರೋಪಿಯ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು,ಮಾರ್ಚ್,18,2025 (www.justkannada.in):   ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ತರುಣ್ ರಾಜ್ ಜಾಮೀನು ಅರ್ಜಿಯ ಆದೇಶವನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ನಾಳೆಗೆ ಕಾಯ್ದಿರಿಸಿದೆ.

ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾರಾವ್ ಸ್ನೇಹಿತ ತರುಣ್ ರಾಜ್ ಬಂಧನವಾಗಿತ್ತು.  ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಕೋರಿ  ತರುಣ್ ರಾಜ್ ಅರ್ಜಿ ಸಲ್ಲಿಸಿದರು.

ಇಂದು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯದಲ್ಲಿ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರು, ಜಾಮೀನು ಅರ್ಜಿ ತೀರ್ಪು ಆದೇಶವನ್ನು ನಾಳೆಗೆ ಕಾಯ್ದಿರಿಸಿ ಅದೇಶಿಸಿದರು.

ಪ್ರಕರಣದ ಆರೋಪಿಗಳಾದ ನಟಿ ರನ್ಯಾರಾವ್ ಮತ್ತು ತರುಣ್ ರಾಜ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.

Key words: Actress, Ranyarao, gold smuggling case,  Court, bail application, Tarun Raj