Thursday, August 6, 2026

BDA Apartments

Home Front Page ಅರಮನೆ ಭೂಬಳಕೆ ಮತ್ತು ನಿಯಂತ್ರಣ ವಿಧೇಯಕ ಅಂಗೀಕಾರ: ವಿಧಾನಸಭೆ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ಅರಮನೆ ಭೂಬಳಕೆ ಮತ್ತು ನಿಯಂತ್ರಣ ವಿಧೇಯಕ ಅಂಗೀಕಾರ: ವಿಧಾನಸಭೆ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು,ಮಾರ್ಚ್,21,2025 (www.justkannada.in): ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಿಸಿದಂತೆ ಗದ್ದಲದ ನಡುವೆ ವಿಧಾನಸಭೆಯಲ್ಲಿ ಅರಮನೆ ಭೂ ಬಳಕೆ ಮತ್ತು ನಿಯಂತ್ರಣ ವಿಧೇಯಕ ಅಂಗೀಕಾರವಾಯಿತು.

ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನ ಸ್ಪೀಕರ್ ಯುಟಿ ಖಾದರ್ ಅಮಾನತು ಮಾಡಿ ಕೆಲಕಾಲ ಕಲಾಪವನ್ನ ಮುಂದೂಡಿಕೆ ಮಾಡಿದ್ದರು. ನಂತರ ಮತ್ತೆ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ, ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಮತ್ತೆ ಪ್ರತಿಭಟನೆಗೆ ಮುಂದಾದರು.

ವಿಪಕ್ಷಗಳ ಧರಣಿ ನಡುವೆಯೇ ಅರಮನೆ ಭೂಬಳಕೆ ಮತ್ತು ನಿಯಂತ್ರಣ ವಿಧೇಯಕ ಅಂಗೀಕಾರ ಮಾಡಲಾಯಿತು. ನಂತರ ಸ್ಪೀಕರ್ ಯುಟಿ ಖಾದರ್ ವಿಧಾನಸಭೆ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ ಮಾಡಿದರು.

Key words: Assembly, adjourned, Speaker, UT Khadar