Friday, September 18, 2026

BDA Apartments

ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್ ಪಾಟೀಲ್ ಹೆಸರಿಡಲು ನಿರ್ಧಾರ BDA JK_Adv BDA Adv
Home Front Page ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್ ಪಾಟೀಲ್  ಹೆಸರಿಡಲು ನಿರ್ಧಾರ

ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್ ಪಾಟೀಲ್  ಹೆಸರಿಡಲು ನಿರ್ಧಾರ

ಬೆಂಗಳೂರು, ಮಾರ್ಚ್,27,2025 (www.justkannada.in): ಗದಗಿನ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ.

ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ  ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಅವರು ಈ ವಿಷಯವನ್ನು ತಿಳಿಸಿದರು.

ಸಹಕಾರಿ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಕೆ.ಎಚ್. ಪಾಟೀಲರು ರಾಜ್ಯದಲ್ಲಿ ಸಚಿವರಾಗಿ, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಮಹಾನ ನಾಯಕನ ಹೆಸರನ್ನು ಸಾರ್ವಜನಿಕ ಸೇವೆ ಮಾಡುತ್ತಿರುವ ಗದಗ ಮೆಡಿಕಲ್ ಕಾಲೇಜಿಗೆ ನಾಮಕರಣ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ವಿವರಿಸಿದರು.

Key words: Decision, name, K.H. Patil, Gadag Medical College