Saturday, August 8, 2026

BDA Apartments

Home Front Page ಬೆಂಗಳೂರು ಪ್ರವಾಸಕ್ಕೆ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷರು :ಸಚಿವ ದಿನೇಶ್ ಗುಂಡೂರಾವ್ ರಿಂದ ಸ್ವಾಗತ

ಬೆಂಗಳೂರು ಪ್ರವಾಸಕ್ಕೆ ಆಗಮಿಸಿದ ಚಿಲಿ ಗಣರಾಜ್ಯದ ಅಧ್ಯಕ್ಷರು :ಸಚಿವ ದಿನೇಶ್ ಗುಂಡೂರಾವ್ ರಿಂದ ಸ್ವಾಗತ

ಬೆಂಗಳೂರು, ಏಪ್ರಿಲ್, 4,2025 (www.justkannada.in):  ಚಿಲಿ ಗಣರಾಜ್ಯದ ಅಧ್ಯಕ್ಷ  ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರು ಎರಡು ದಿನಗಳ ಬೆಂಗಳೂರು ಪ್ರವಾಸ ಹಮ್ಮಿಕೊಂಡಿದ್ದು, ಇಂದು ಮಧ್ಯಾಹ್ನ 12.30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಈ ವೇಳೆ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಅವರನ್ನು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೂ ಗುಚ್ಚ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ. ಬೆಂಗಳೂರು ಪೊಲೀಸ್ ಆಯುಕ್ತ  ಬಿ. ದಯಾನಂದ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್. ಜಿ  ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಸೇರಿದಂತೆ ಚಿಲಿ ಗಣರಾಜ್ಯದ ಅಧಿಕಾರಿಗಳು ಹಾಗೂ ಇತರೆ ಗಣ್ಯರು  ಉಪಸ್ಥಿತರಿದ್ದರು.

Key words: Chile Republic, President, Bengaluru, visit