ಬೀದರ್, ಏಪ್ರಿಲ್,18,2025 (www.justkannada.in): ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳಿಗೆ ಶಿವಮೊಗ್ಗ ಬೀದರ್ ನಲ್ಲಿ ಜನಿವಾರ ತೆಗೆಸಿದ್ದಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿದ್ದು ಇದೀಗ ಬೀದರ್ ನಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸಿ 24 ಗಂಟೆಗಳೊಳಗೆ ವರದಿ ನೀಡುವಂತೆ ಅಲ್ಲಿನ ಜಿಲ್ಲಾಧಿಕಾರಿಗೆ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಜಿಲ್ಲಾಧಿಕಾರಿ ಡಿಸಿ ಶಿಲ್ಪಾ ಶರ್ಮಾ ಅವರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಸಿಬ್ಬಂದಿಗಳು ಮಾಡಿದ ಎಡವಟ್ಟಿನಿಂದ ಇಂದು ವಿದ್ಯಾರ್ಥಿಯ ಭವಿಷ್ಯ ನಾಶವಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಹೀಗಾಗಿ ಉಪ ವಿಭಾಗಾಧಿಕಾರಿ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ ನಿಯಮಾನುಸಾರ ತಪ್ಪು ಮಾಡಿದವರ ಮೇಲೆ ಶಿಸ್ತು ಕ್ರಮವಹಿಸಿ, 24 ಗಂಟೆಯೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಬೀದರ್ ಮತ್ತು ಶಿವಮೊಗ್ಗದಲ್ಲಿ ನಿನ್ನೆ ಸಿಇಟಿ ಪರೀಕ್ಷೆ ವೇಳೆ ಜನಿವಾರ ಹಾಕಿ ಬಂದ ವಿದ್ಯಾರ್ಥಿಗಳಿಗೆ ಅವಕಾಶ ನೀಡದೆ ಜನಿವಾರ ತೆಗೆಯುವಂತೆ ಸೂಚಿಸಿದ್ದರು. ಈ ವಿಚಾರ ಬಾರಿ ವಿವಾದವಾಗಿದ್ದು ಇದೀಗ ತನಿಖೆಗೆ ಸೂಚಿಸಲಾಗಿದೆ.
Key words: Minister, Ishwar Khandre, janivara, investigate, report