Friday, July 31, 2026

BDA Apartments

Home Front Page ಬರ ಪರಿಸ್ಥಿತಿ ಕುರಿತು ಡಿಸಿ ಮತ್ತು ಸಿಇಒ ಜತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ ಕಾನ್ಫರೆನ್ಸ್…

ಬರ ಪರಿಸ್ಥಿತಿ ಕುರಿತು ಡಿಸಿ ಮತ್ತು ಸಿಇಒ ಜತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ ಕಾನ್ಫರೆನ್ಸ್…

ಬೆಂಗಳೂರು, ಮೇ 15,2019(www.justkannada.in):  ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಪ್ರಾರಂಭಿಸಿದ್ದಾರೆ.

ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮಾ, ಕಂದಾಯ, ಆರ್ಥಿಕ, ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ಇಲಾಖೆಯ ಹಿರಿಯ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರು ಅಧಿಕಾರಿಗಳೊಂದಿಗೆ ಕುಡಿಯುವ ನೀರಿನ ವ್ಯವಸ್ಥೆ, ಜಾನುವಾರು ಸಂರಕ್ಷಣೆಗಾಗಿ ಮೇವು ಲಭ್ಯತೆ, ಗೋಶಾಲೆ ಹಾಗೂ ಮೇವು ಬ್ಯಾಂಕ್, ಉದ್ಯೋಗ ಸೃಜನೆ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಲಿದ್ದಾರೆ.

Key words: CM HD Kumaraswamy -Video Conference DC – CEO –Drought- Condition