ಹಾವೇರಿ, ಮೇ,1,2025 (www.justkannada.in): ಕರ್ತವ್ಯದ ವೇಳೆ ಮಾರ್ಗಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ಚಾಲಕ ಎ.ಆರ್.ಮುಲ್ಲಾ ಎಂಬುವವರನ್ನ ಅಮಾನತು ಮಾಡಿ ಆದೇಶಿಸಲಾಗಿದೆ.
ಹಾನಗಲ್ ಘಟಕದ ಚಾಲಕ ಎ.ಆರ್.ಮುಲ್ಲಾ ಎಂಬುವವರು ಕರ್ತವ್ಯದಲ್ಲಿದ್ದ ವೇಳೆ ರಸ್ತೆ ಪಕ್ಕಕ್ಕೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಡ್ರೈವರ್ ಮುಲ್ಲಾ ನಡೆಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದತ್ತು.
ಇದೀಗ ಕರ್ತವ್ಯಲೋಪ ಆರೋಪದಲ್ಲಿ ಚಾಲಕ ಎ.ಆರ್.ಮುಲ್ಲಾನನ್ನು ಅಮಾನತುಗೊಳಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿಸ್ತುಪಾಲನೆ ಅಧಿಕಾರಿ ಇಂದು ಆದೇಶ ಹೊರಡಿಸಿದ್ದಾರೆ. ವಿಚಾರಣೆ ಮುಗಿಯುವವರೆಗೂ ಅಮಾನತು ಮಾಡಲಾಗಿದ್ದು, ಘಟನೆ ಬಗ್ಗೆ ಸಂಪೂರ್ಣ ವಿವರಣೆ ನೀಡುವಂತೆ ಸೂಚನೆ ನೀಡಿದ್ದಾರೆ.
ಘಟನೆ ಸಂಬಂಧ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು, ಪ್ರತಿ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದೆ. ಆದರೆ, ಸಾರ್ವಜನಿಕ ಸೇವೆಯಲ್ಲಿರುವವರು ಕರ್ತವ್ಯ ವೇಳೆ ಹೊರತುಪಡಿಸಿ ತಮ್ಮ ಧರ್ಮವನ್ನು ಪಾಲಿಸಬಹುದಾಗಿದೆ. ಹೀಗಾಗಿ ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಆಕ್ಷೇಪಾರ್ಹ . ಈ ಕುರಿತು ಸೂಕ್ತ ತನಿಖೆ ನಡೆಸಿ ಸಿಬ್ಬಂದಿ ತಪ್ಪು ಮಾಡಿದ್ದರೇ ಶಿಸ್ತು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದರು.
Key words: Bus driver, suspended, duty time, Prayer