ಬೆಂಗಳೂರು,ಮೇ,2,2025 (www.justkannada.in): ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನನ್ನ ವಿರುದ್ದ ಸ್ಪರ್ಧಿಸಿ ಗೆಲ್ಲಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಕಿದ್ದ ಸವಾಲು ಸ್ವೀಕರಿಸಿ ಇದೀಗ ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ತಮ್ಮ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ಅವರು ಇಂದು ಸ್ಪೀಕರ್ ಯುಟಿ ಖಾದರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಸವಾಲನ್ನು ಸ್ವೀಕಾರ ಮಾಡಿರುವ ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಶಾಸಕ ಯತ್ನಾಳ್ ಸವಾಲು ಸ್ವೀಕರಿಸಿ ರಾಜೀನಾಮೆ ನೀಡಿದ್ದೇನೆ. ಅವರು ಬಸವನಬಾಗೇವಾಡಿ ಕ್ಷೇತ್ರದಲ್ಲಾದರೂ ನಿಲ್ಲಲಿ ಇಲ್ಲವಾದರೇ ಅವರು ರಾಜೀನಾಮೆ ನೀಡಲಿ ಅವರ ಕ್ಷೇತ್ರದಲ್ಲೇ ನಾನು ಸ್ಪರ್ಧಿಸಲು ಸಿದ್ದನಿದ್ದೇನೆ ಎಂದರು.
Key words: Minister, Shivanand Patil, resigns , MLA, post