ಹುಬ್ಬಳ್ಳಿ,ಮೇ,6,2025 (www.justkannada.in): ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಕಿರೆಸೂರ ಗ್ರಾಮದ ಇಂಗಳಹಳ್ಳಿ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ಶ್ವೇತಾ (29), ಅಂಜಲಿ(26), ಸಂದೀಪ (26), ವಿಠಲ (55) ಮತ್ತು ಶಶಿಕಲಾ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ನವಲಗುಂದ ಕಡೆಯಿಂದ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐದು ಮಂದಿ ಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರು ಬಾಗಲಕೋಟೆಯಲ್ಲಿ ಹೋಟೆಲ್ ನಡೆಸುತ್ತಿದ್ದರು ಎನ್ನಲಾಗಿದೆ. ನಿಶ್ಚಿತಾರ್ಥ ಮುಗಿಸಿಕೊಂಡು ಕಾರಿನಲ್ಲಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Car-lorry, collision, Five, death, same family