ಸಿಎಂ ಸಿದ್ದರಾಮಯ್ಯ ಬಗ್ಗೆ ಜೈಲು ವಾರ್ಡರ್ ನಿಂದನೆ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ, ಆಕ್ರೋಶ

ಮೈಸೂರು,ಮೇ,6, 2025 (www.justkannada.in): ಸಿಎಂ ಸಿದ್ದರಾಮಯ್ಯ ಬಗ್ಗೆ ಜೈಲ್ ವಾರ್ಡರ್ ಒಬ್ಬರು ಅವಾಚ್ಯ ಶಬ್ದಗಳ ಬಳಸಿ ನಿಂದನೆ ಹಿನ್ನಲೆ  ಮೈಸೂರು ಜಿಲ್ಲಾ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ಕೇಂದ್ರ ಕಾರಾಗೃಹದ ಬಳಿ ಜಿಲ್ಲಾ ಕಾಂಗ್ರೆಸ್ ಮತ್ತು ಡಿಸಿಸಿ ಜಿಲ್ಲಾಧ್ಯಕ್ಷ ಬಿ.ಜೆ ವಿಜಯಕುಮಾರ್, ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಮಧು ಕುಮಾರ್ ಬಂಧನಕ್ಕೆ ಆಗ್ರಹಿಸಿದರು.

ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ವಾರ್ಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಧು ಕುಮಾರ್ ಸಿಎಂ ಸಿದ್ದರಾಮಯ್ಯರನ್ನ ಬಾಯಿಗೆ ಬಂದಹಾಗೆ ಬೈದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ . ಈತನ ಹಿಂದೆ ಬಿಜೆಪಿ ನಾಯಕರ ಕೈವಾಡ ಇದೆ. ಕೂಡಲೇ ಮಧು ಕುಮಾರ್ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಾಳೆ 3 ಗಂಟೆ ತನಕ ಗಡುವು ಕೊಡಲಾಗುತ್ತದೆ. ಇಲ್ಲದಿದ್ದರೆ ನಗರದ ಪೋಲಿಸ್ ಕಮಿಷನರ್ ಕಚೇರಿ ಬಳಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು  ಎಚ್ಚರಿಕೆ ನೀಡಿದ್ದು ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರ ಪಿಎಸ್ ರಮೇಶ್ ಬಳಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು

ಪ್ರತಿಭಟನೆಯಲ್ಲಿ ರಾಜ್ಯ ಕುರುಬ ಸಂಘದ ನಿಕಟ ಪೂರ್ವ ಅಧ್ಯಕ್ಷ ಸುಬ್ಬಣ್ಣ, ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ಕಾಂಗ್ರೆಸ್  ಕಾರ್ಯಕರ್ತರು ಭಾಗಿಯಾಗಿದ್ದರು.

Key words: abuse, CM Siddaramaiah, Protest, Mysore, Congress