ನವದೆಹಲಿ, May06,2025: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಗುಪ್ತಚರ ವರದಿ ಬಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ.
ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿ ನಡೆಯುವ ಮೂರು ದಿನಗಳ ಮೊದಲು ಇಂಟೆಲ್ ವರದಿಯನ್ನು ಪ್ರಧಾನಿಗೆ ಕಳುಹಿಸಲಾಗಿದೆ ಎಂದು ಖರ್ಗೆ ಹೇಳಿದರು.
“ಗುಪ್ತಚರ ವೈಫಲ್ಯವಿದೆ, ಸರ್ಕಾರ ಅದನ್ನು ಒಪ್ಪಿಕೊಂಡಿದೆ. ಅವರಿಗೆ ಮೊದಲೆ ಇದು ತಿಳಿದಿದ್ದರೆ, ಅವರು ಏಕೆ ಏನನ್ನೂ ಮಾಡಲಿಲ್ಲ?.
ದಾಳಿಯ ಮೂರು ದಿನಗಳ ಮೊದಲು, ಗುಪ್ತಚರ ವರದಿಯನ್ನು ಪ್ರಧಾನಿ ಮೋದಿಯವರಿಗೆ ಕಳುಹಿಸಲಾಗಿದೆ ಎಂದು ನನಗೆ ಮಾಹಿತಿ ಸಿಕ್ಕಿತು, ಆದ್ದರಿಂದ ಅವರು ಕಾಶ್ಮೀರಕ್ಕೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಗೊಳಿಸಿದರು ” ಎಂದು ಖರ್ಗೆ ಹೇಳಿದರು.
ಪಹಲ್ಗಾಮ್ನಲ್ಲಿ ರಜಾದಿನಗಳನ್ನು ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ 26 ಜನ ಹತರಾದರು. ಉಗ್ರರ ಈ ದಾಳಿಯಲ್ಲಿ ಗುಪ್ತಚರ ವೈಫಲ್ಯವಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ ಎಂದ ಖರ್ಗೆ, ” ನಮ್ಮ ಪ್ರಶ್ನೆಯೆಂದರೆ ನಿಮಗೆ ಅದರ ಬಗ್ಗೆ ಮುಂಚಿತವಾಗಿಯೇ ತಿಳಿದಾಗ ಸೂಕ್ತ ಸುರಕ್ಷತಾ ಕ್ರಮಗಳನ್ನು ಏಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.
ಕೃಪೆ: ಇಂಡಿಯಾ ಟುಡೆ
key words: The Prime Minister Modi, Kashmir attack, Mallikarjun Kharge
The Prime Minister Modi had information about the Kashmir attack. That’s why he cancelled his visit: Mallikarjun Kharge