ಪ್ರಧಾನಿ ಮೋದಿ ಭೇಟಿಯಾಗಿ ಚರ್ಚಿಸಿದ ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ಧೋವೆಲ್

ನವದೆಹಲಿ,ಮೇ,8,2025 (www.justkannada.in): ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕವಾಗಿ ಅಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ 9 ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ 80 ರಿಂದ 100ಕ್ಕೂ ಹೆಚ್ಚು ಉಗ್ರರನ್ನ ಹತ್ಯೆಗೈದಿದೆ. ಈ ಮಧ್ಯೆ ಇದೀಗ ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ಧೋವೆಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿದ್ದಾರೆ.

ಇಂದು  ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾದ ಅಜಿತ್ ಧೋವೆಲ್ ಭದ್ರತೆ ಬಗ್ಗೆ ಚರ್ಚಿಸಿದ್ದಾರೆ. ಪಾಕಿಸ್ತಾನ ನಿನ್ನೆ ಶೆಲ್ ದಾಳಿ ನಡೆಸಿದ್ದು ಈ ದಾಳಿಯಲ್ಲಿ 15 ಕಾಶ್ಮೀರ ನಾಗರಿಕರು ಸಾವನ್ನಪ್ಪಿದ್ದು ಈ ಕುರಿತು ಮಾಹಿತಿ ನೀಡಿದರು.

ಜಮ್ಮು ಕಾಶ್ಮೀರದ ಪರಿಸ್ಥಿತಿ ಜಮ್ಮುಕಾಶ್ಮೀರ ಗಡಿಯಲ್ಲಿ  ಪಾಕ್ ಗುಂಡಿನ ದಾಳಿ  14ನೇ ದಿನವೂ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ಕುರಿತು ಅಜಿತ್ ಧೋವೆಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಹಾಗೆಯೇ ಮುಂದಿನ ಕ್ರಮಗಳ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.

Key words: National Security Advisor, Ajit Doval, meets, PM Modi