ಆಪರೇಷನ್ ಸಿಂಧೂರ’: ಸರ್ವಪಕ್ಷ ಸಭೆ: ಆಡಳಿತ-ವಿಪಕ್ಷ ನಾಯಕರು ಭಾಗಿ

ನವದೆಹಲಿ,ಮೇ,8,2025 (www.justkannada.in):  ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿ 9 ಉಗ್ರರ ನೆಲೆಗಳನ್ನ ಭಾರತೀಯ ಸೇನೆ  ಧ್ವಂಸಗೊಳಿಸಿದ್ದು ಈ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸುತ್ತಿದೆ.

ಆಪರೇಷನ್ ಸಿಂಧೂರ್’ ಯಶಸ್ಸು ಮತ್ತು ಅದರ ಪರಿಣಾಮಗಳ ಕುರಿತು ಸರ್ಕಾರ ಇಂದಿನ ಸರ್ವಪಕ್ಷ ಸಭೆಯಲ್ಲಿ ಮಾಹಿತಿ ನೀಡಲಿದೆ. ಸರ್ಕಾರದ ಉನ್ನತ ಮಟ್ಟದ ನಾಯಕರು ಮತ್ತು ವಿರೋಧ ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಂಡು ಚರ್ಚಿಸುತ್ತಿದ್ದಾರೆ.

ಕೇಂದ್ರ ರಕ್ಷಣಾ ಸಚಿವ  ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು,  ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ವಿದೇಶಾಂಗ ಸಚಿವ  ಎಸ್ ಜೈಶಂಕರ್,  ಕೇಂದ್ರ ಸಚಿವರಾದ ಜೆಪಿ ನಡ್ಡಾ ನಿರ್ಮಲಾ ಸೀತಾರಾಮನ್ ಪಾಲ್ಗೊಂಡಿದ್ದಾರೆ.

ಕಾಂಗ್ರೆಸ್‌ನಿಂದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೃಣಮೂಲ ಕಾಂಗ್ರೆಸ್‌ ನ ಸಂದೀಪ್ ಬಂಡೋಪಾಧ್ಯಾಯ ಮತ್ತು ಡಿಎಂಕೆಯ ಟಿ ಆರ್ ಬಾಲು ಸಭೆಯಲ್ಲಿ ಪ್ರಮುಖ ವಿರೋಧ ಪಕ್ಷದ ನಾಯಕರು ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.

ಸಮಾಜವಾದಿ ಪಕ್ಷದ ರಾಮ್ ಗೋಪಾಲ್ ಯಾದವ್, ಎಎಪಿಯ ಸಂಜಯ್ ಸಿಂಗ್, ಶಿವಸೇನೆಯ (ಯುಬಿಟಿ) ಸಂಜಯ್ ರಾವತ್, ಎನ್‌ಸಿಪಿ (ಎಸ್‌ಪಿ) ಯ ಸುಪ್ರಿಯಾ ಸುಲೆ ಸಭೆಯಲ್ಲಿ ಉಪಸ್ಥಿತರಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಅಪರೇಷನ್ ಸಿಂಧೂರದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

Key words: ‘Operation Sindoor,  All-party, meeting