ನಾಳೆ ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಮೇ,8,2025 (www.justkannada.in): ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರು ಮೇ 9 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಸಂಜೆ 4:00 ಗಂಟೆಗೆ ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಬಿಡುಗಡೆಯಾಗಲಿರುವ ಬೆಲ್ಲದಾರತಿ ಸ್ಮರಣ ಸಂಚಿಕೆಯ ಕುರಿತು ಜಿಲ್ಲಾಧಿಕಾರಿಗಳು, ಸ್ಮರಣ ಸಂಚಿಕೆಯ ಅಧ್ಯಕ್ಷರಾದ ಅಪರ ಜಿಲ್ಲಾಧಿಕಾರಿಗಳು, ಸಂಪಾದಕರು ಹಾಗೂ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷರಾದ ಡಾ. ಎಚ್. ಎಸ್. ಮುದ್ದೇಗೌಡ ಅವರೊಂದಿಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆಯುವ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ 7:00 ಗಂಟೆಗೆ ರಸ್ತೆ ಮೂಲಕ ಮಹೇಶ್ ಜೋಶಿ ಕೇಂದ್ರ ಸ್ಥಾನ ಬೆಂಗಳೂರಿಗೆ ತಲುಪಲ್ಲಿದ್ದಾರೆ.

Key words: Tomorrow, Kasapa President, Dr. Mahesh Joshi, Mysore District, Tour