ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಮೇ,10,2025 (www.justkannada.in): ಭಾರತ- ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ಡಿಸಿ, ಎಸ್ಪಿ, ಆಯುಕ್ತರ ಜೊತೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಗತ್ಯ ವಸ್ತುಗಳ ದರ ಹೆಚ್ಚಳ ಆಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಅಕ್ರಮ ದಾಸ್ತಾನು ಕಾಳಸಂತೆ  ಮೇಲೆ ನಿರಂತರವಾಗಿ ನಿಗಾ ಇಡಬೇಕು.  ಯುದ್ದದ ಪರಿಸ್ಥಿತಿ ತಿಳಿಯಾಗವವರೆಗೆ ಜನರಲ್ಲಿ ಜಾಗೃತಿ ಮೂಡಿಸಿ  ಯುದ್ದದ ಸಂದರ್ಭದಲ್ಲಿ ಜನ ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಿ ಎಂದು ಸೂಚಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದರಾಗಬೇಕು.  ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚು ಭದ್ರತೆ ಒದಗಿಸಬೇಕು. ಸುಳ್ಳು ಸುದ್ದಿ ಹರಡುವುದನ್ನ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಸೂಚಿಸಿದ್ದಾರೆ.

Key words: maintain law and order, Increase, security, CM, Siddaramaiah, Meeting