ನವದೆಹಲಿ,ಮೇ,10,2025 (www.justkannada.in): ಕಳೆದ ನಾಲ್ಕು ದಿನಗಳಿಂದ ಭಾರತ –ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಿಸಲು ಒಪ್ಪಿಕೊಂಡಿವೆ ಎಂದು ಈಗಾಗಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಪಾಕ್ ಭಾರತ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಮೇ12 ರಂದು ಮಧ್ಯಾಹ್ನ 12 ಗಂಟೆಗೆ ಭಾರತ-ಪಾಕಿಸ್ತಾನದ ನಡುವೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.
Key words: Ceasefire, India, Pak , Decision, talks, May 12