ರಾಜ್ಯ ಸಂಪುಟ ಪುನಾರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?

ಮೈಸೂರು,ಮೇ,12,2025 (www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೇರಿ ಎರಡು ವರ್ಷ ತುಂಬುತ್ತಿದ್ದು, ಈ ಮಧ್ಯೆ ಸಚಿವ ಸಂಪುಟ ಪುನರಚನೆ ವಿಚಾರ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಹೆಚ್.ಡಿ ಕೋಟೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸಂಪುಟ ಪುನಾರಚನೆ ವಿಚಾರದ ಬಗ್ಗೆ ಏನು ಚರ್ಚೆ ಆಗಿಲ್ಲ. ಪುನಾರಚನೆ ಮಾಡುವಾಗ ಮಾಧ್ಯಮದವರಿಗೆ ಹೇಳಿಯೇ ಮಾಡುತ್ತೇನೆ ಎಂದಿದ್ದಾರೆ.

ರಾಜ್ಯ ಸರ್ಕಾರದ 2 ವರ್ಷದ ಸಾಧನೆ ಕಾರ್ಯಕ್ರಮ ಮಾಡಬೇಕು. ಈ ಬಗ್ಗೆ ರಾಹುಲ್ ಗಾಂಧಿ ಮಲ್ಲಿಕಾರ್ಜುನ್ ಖರ್ಗೆ ಜೊತೆ ಮಾತುಕತೆ ಆಗಿದೆ. ಕಾರ್ಯಕ್ರಮದ ಬಗ್ಗೆ ಚರ್ಚೆ ಆದಾಗ ಯುದ್ಧ ಶುರುವಾಗಿರಲಿಲ್ಲ. ಸದ್ಯಕ್ಕೆ ಕದನ ವಿರಾಮವಿದೆ. ಕಾರ್ಯಕ್ರಮದ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Key words: Cabinet, Restructure, CM Siddaramaiah, response