ಬೆಂಗಳೂರು,ಮೇ,12,2025 (www.justkannada.in): ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆರಂಭಿಸಿರುವ ವಿದ್ಯಾರ್ಥಿಸ್ನೇಹಿ ಉಪಕ್ರಮಗಳಾದ ಕಾಲೇಜು ಪೋರ್ಟಲ್, ಮೊಬೈಲ್ ಆ್ಯಪ್ ಮತ್ತು ಚಾಟ್ ಬಾಟ್ ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಾಲನೆ ನೀಡಿದರು.
ಉನ್ನತ ಶಿಕ್ಷಣ ಪರಿಷತ್ತಿನ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಸಮಾರಂಭದಲ್ಲಿ ಮೂರೂ ಉಪಕ್ರಮಗಳನ್ನು ನಾಡಿಗೆ ಸಮರ್ಪಿಸಿದ ನಂತರ ಮಾತನಾಡಿದ ಸಚಿವ ಎಂ.ಸಿ ಸುಧಾಕರ್, ʼಪರೀಕ್ಷಾ ಪ್ರಕ್ರಿಯೆಯನ್ನು ಸುಗಮಗೊಳಿಸಲು ಹಾಗೂ ಅಭ್ಯರ್ಥಿಸ್ನೇಹಿ ಆಗಿಸಲು ಕಾಲಕಾಲಕ್ಕೆ ಆಧುನಿಕ ತಂತ್ರಜ್ಞಾನ ಅಳವಡಿಕೆಯಲ್ಲಿ ಪರೀಕ್ಷಾ ಪ್ರಾಧಿಕಾರ ಸದಾ ಮುಂದಿದೆʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದರ ಪರಿಣಾಮಾಗಿ ನಿಖರವಾದ ಸಮಯದಲ್ಲಿ ಖಚಿತವಾದ ಮಾಹಿತಿ ಲಭ್ಯವಾಗುತ್ತದೆ. ಅನಗತ್ಯ ಗೊಂದಲಕ್ಕೆ ತೆರೆ ಬೀಳುತ್ತದೆ. ಮಧ್ಯವರ್ತಿಗಳ ಹಾವಳಿ ಕೂಡ ತಪ್ಪುತ್ತದೆ ಎಂದು ವಿವರಿಸಿದರು.
ಕಾಲೇಜು ಪೋರ್ಟಲ್ (College Portal):
ಅಭ್ಯರ್ಥಿಗಳು ಆಪ್ಷನ್ ದಾಖಲಿಸುವುದಕ್ಕೂ ಮುನ್ನ ಕಾಲೇಜು ಆಯ್ಕೆ ಪ್ರಮುಖ ಘಟ್ಟ. ಅಂತಹ ಸಂದರ್ಭದಲ್ಲಿ ಅಲ್ಲಿ- ಇಲ್ಲಿ ಕೇಳಿ ಪಡೆಯುವುದರ ಬದಲು ಕಾಲೇಜು ಪೋರ್ಟಲ್ ನಲ್ಲೇ ಸಂಬಂಧಪಟ್ಟ ಕಾಲೇಜಿನ ಮಾಹಿತಿ ಲಭ್ಯವಾಗುವ ಹಾಗೇ ಮಾಡಲಾಗಿದೆ. ಇದನ್ನು ಕಾಲೇಜಿನವರೇ ಅಪ್ ಲೋಡ್ ಮಾಡಲು ಅವಕಾಶ ನೀಡಲಾಗಿದೆ ಎಂದು ಸಚಿವ ಎಂ.ಸಿ ಸುಧಾಕರ್ ತಿಳಿಸಿದರು.
ಕಾಲೇಜುಗಳಲ್ಲಿನ ಮೂಲಸೌಲಭ್ಯ, ಶೈಕ್ಷಣಿಕ ವಾತಾವರಣ, ಪ್ರಯೋಗಾಲಯ, ಗ್ರಂಥಾಲಯ, ಕೊಠಡಿ, ಹಾಸ್ಟೆಲ್, ಕೋರ್ಸ್ ವಾರು ಶುಲ್ಕದ ವಿವರ, ಅತಿಥಿ ಉಪನ್ಯಾಸಕರು ಸೇರಿದಂತೆ ಕಾಯಂ ಸಿಬ್ಬಂದಿಯ ಮಾಹಿತಿ ಇತ್ಯಾದಿ ಪೂರ್ಣ ವಿವರಗಳು ಪೋರ್ಟಲ್‌ನಲ್ಲಿ ಲಭ್ಯ ಇರುತ್ತವೆ. ಎಷ್ಟೋ ಮಂದಿ ಕಾಲೇಜಿನ ಮಾಹಿತಿ ಇಲ್ಲದೆ, ಆಪ್ಫನ್ ದಾಖಲಿಸಿ, ನಂತರ ಸೀಟು ಸಿಕ್ಕಿದ ಮೇಲೆ, ಅಯ್ಯೊ ಅದು ಸರಿ ಇಲ್ಲ; ಮತ್ತೊಂದು ಕಡೆ ಸೀಟು ಕೊಡಿ ಎನ್ನುವುದು ಮಾಮೂಲು. ಹೀಗಾಗಿ ಈ ರೀತಿಯ ಹೊಸ ಉಪಕ್ರಮ ಸೂಕ್ತ ಕಾಲೇಜುಗಳ ಆಯ್ಕೆಗೆ ನೆರವಾಗಲಿದೆ ಎಂದರು.
ನಿಗದಿಗಿಂತ ಹೆಚ್ಚು ಶುಲ್ಕ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ವಿರುದ್ಧ ದೂರು ದಾಖಲಿಸುವುದಕ್ಕೂ ಇದೇ ಪೋರ್ಟಲ್ ನಲ್ಲಿ ಲಿಂಕ್ ನೀಡುವ ಉದ್ದೇಶವೂ ಇದೆ. ನೇರವಾಗಿ ಶುಲ್ಕ ನಿಯಂತ್ರಣ ಸಮಿತಿಗೆ ದೂರು ಹೋಗುವ ಹಾಗೆ ಮಾಡಲಾಗುವುದು ಎಂದು ಅವರು ಹೇಳಿದರು.
ಕೆಇಎ ಮೊಬೈಲ್ ಆ್ಯಪ್ (KEA Mobile App):
ಇದೇ ಮೊದಲ ಬಾರಿಗೆ ಮತ್ತಷ್ಟು ವಿದ್ಯಾರ್ಥಿ ಸ್ನೇಹಿಯಾಗುವ ಉಪಕ್ರಮದ ಭಾಗವಾಗಿ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ. ಸಾಮಾನ್ಯವಾಗಿ ಯುವಕರು ಆ್ಯಪ್ ಬಳಕೆ ಸ್ನೇಹಿಯಾಗಿರುತ್ತಾರೆ. ಹೀಗಾಗಿ ಈ ಇದನ್ನು ರೂಪಿಸಲಾಗಿದೆ ಎಂದು ಸಚಿವ ಎಂ.ಸಿ ಸುಧಾಕರ್ ತಿಳಿಸಿದರು.
ವೆಬ್ ಸೈಟ್ ನಲ್ಲಿ ಲಭ್ಯವಾಗುವ ಎಲ್ಲ ಮಾಹಿತಿ ಈ ಆ್ಯಪ್ ನಲ್ಲಿ ಲಭ್ಯ ಇರುತ್ತದೆ. ಆ್ಯಪ್ ಮೂಲಕವೇ ಅರ್ಜಿ ಹಾಕುವುದು, ಆಪ್ಷನ್ ದಾಖಲಿಸುವುದು, ಛಾಯ್ಸ್ ಆಯ್ಕೆ, ಶುಲ್ಕ ಪಾವತಿ ಸೇರಿದಂತೆ ಎಲ್ಲ ಪ್ರಕ್ರಿಯೆಗಳನ್ನು ಮಾಡಬಹುದು. ಆ್ಯಪ್ ಡೌನ್ ಲೋಡ್ ಮಾಡಿಕೊಂಡವರಿಗೆ ಕಾಲಕಾಲಕ್ಕೆ ಅಲರ್ಟ್ ಸಂದೇಶ ಕಳುಹಿಸುವ ವ್ಯವಸ್ಥೆ ಕೂಡ ಇರುತ್ತದೆ. ಗ್ರಾಮೀಣ ಭಾಗದ ಬಹುತೇಕ ಮಕ್ಕಳು ಸಿಇಟಿ ಅರ್ಜಿ ಭರ್ತಿ ಹಾಗೂ ಅನ್ ಲೈನ್ ಸೀಟು ಹಂಚಿಕೆ ಸಂಬಂಧದ ಪ್ರಕ್ರಿಯೆಗೆ ಸೈಬರ್ ಸೆಂಟರ್ ಗಳ ಮೇಲೆ ಹೆಚ್ವು ಅವಲಂಬನೆಯಾಗಿ ಅನೇಕ ತಪ್ಪುಗಳನ್ನು ಮಾಡಿಕೊಂಡು ಪರದಾಡುವ ಪರಿಸ್ಥಿತಿ ಇತ್ತು. ಹೀಗಾಗಿಯೇ ಇದಕ್ಕೊಂದು ಪರಿಹಾರವಾಗಿ ಮೊಬೈಲ್ ಆ್ಯಪ್ ರೂಪಿಸಿದ್ದು, ಬಹುತೇಕ ಎಲ್ಲ ಪ್ರಕ್ರಿಯೆಗಳನ್ನೂ ಅಭ್ಯರ್ಥಿಗಳೇ ಮಾಡಿಕೊಳ್ಳಬಹುದು ಎಂದು ಅವರು ವಿವರಿಸಿದರು.
ಕೆಇಎ ಚಾಟ್ ಬಾಟ್ (KEA Chat BOT)
ಬುದ್ಧಿಮತ್ತೆ ತಂತ್ರಜ್ಞಾನದ ನೆರವಿನ ಚಾಟ್ ಬಾಟ್ ವ್ಯವಸ್ಥೆ ಬಳಸಿ ಅಭ್ಯರ್ಥಿಗಳು ತಮ್ಮ ಪ್ರಶ್ನೆ/ಅನುಮಾನಗಳಿಗೆ ನೇರವಾಗಿ ಉತ್ತರ ಪಡೆಯಲು ಸಾಧ್ಯವಾಗುತ್ತದೆ. ಪ್ರಾಯೋಗಿಕವಾಗಿ ಆರಂಭಿಸಿದ ನಂತರ ಇದುವರೆಗೂ 1.35 ಲಕ್ಷ ಅಭ್ಯರ್ಥಿಗಳು ಇದರ ಮೂಲಕ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದಿರುವುದು ಇದು ಎಷ್ಟು ಉಪಯುಕ್ತ ಎನ್ನುವುದನ್ನು ತೋರಿಸುತ್ತದೆ ಎಂದು ಸಚಿವ ಎಂ.ಸಿ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಕೆಇಎ ಪ್ರಕಟಿಸುವ ಎಲ್ಲ ಮಾಹಿತಿಯನ್ನು ಚಾಟ್ ಬಾಟ್ ವ್ಯವಸ್ಥೆಗೆ ಅಪ್ ಲೋಡ್ ಮಾಡಲಾಗುತ್ತದೆ. ಅಭ್ಯರ್ಥಿಗಳು ತಾವು ಏನನ್ನು ಕೇಳಬೇಕೋ ಅದನ್ನು ಟೈಪ್ ಮಾಡಿದರೆ, ಅಪ್ ಲೋಡ್ ಮಾಡಲಾಗಿರುವ ಮಾಹಿತಿ ಆಧರಿಸಿ ಚಾಟ್ ಬಾಟ್ ಉತ್ತರ ಒದಗಿಸುತ್ತದೆ. ಇದರಿಂದ ಮಾಹಿತಿಗಾಗಿ ಕೆಇಎ ಕಚೇರಿಗೆ ಖುದ್ದು ಬರುವುದಾಗಲಿ ಅಥವಾ ಇತರ ಕಚೇರಿಗಳಿಗೆ ಅಲೆಯುವುದಾಗಲಿ ತಪ್ಪುತ್ತದೆ. ಕುಳಿತಲ್ಲೇ ಮಾಹಿತಿ ಪಡೆಯಲು ನೆರವಾಗುತ್ತದೆ ಎಂದು ಸಚಿವ ಎಂ.ಸಿ ಸುಧಾಕರ್ ವಿವರಿಸಿದರು.
ಸದ್ಯ ಈ ಹೊಸ ವ್ಯವಸ್ಥೆ ಕೇವಲ ಇಂಗ್ಲಿಷ್ ನಲ್ಲಿ ಉತ್ತರ ನೀಡುತ್ತಿದೆ. ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೂ ಮಾಹಿತಿ ಸಿಗುವ ಹಾಗೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ. ತಿಂಗಳೊಳಗೆ ಕನ್ನಡದ ಅವತರಣಿಕೆ ಕೂಡ ಆರಂಭಿಸಲಾಗುತ್ತದೆ. ಬಿಎಸ್ ಎನ್ ಎಲ್ ಇದರ ನಿರ್ವಹಣೆ ಮಾಡುತ್ತಿದೆ ಎಂದು ಸಚಿವ ಎಂ.ಸಿ ಸುಧಾಕರ್ ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಕೌಶಲ ಶುಲ್ಕ ಪರಿಷ್ಕರಣೆ
ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ನೀಡುವ ವಿವಿಧ ರೀತಿಯ ಕೌಶಲ ಆಧಾರಿತ ತರಬೇತಿಗೆ ಹೆಚ್ಚುವರಿ ಶುಲ್ಕ ವಸೂಲಿಗೆ ಹಿಂದಿನ ಸರ್ಕಾರ ಅವಕಾಶ ನೀಡಿದ್ದು, ಅದನ್ನು ಮುಂದಿನ ವರ್ಷ ಪರಿಷ್ಕರಣೆ ಮಾಡಲಾಗುವುದು. ಕಾಲೇಜುಗಳಲ್ಲಿ ಹೆಚ್ಚುವರಿಯಾಗಿ ಏನೆಲ್ಲ ತರಬೇತಿ ನೀಡಲಾಗುತ್ತಿದೆ ಎಂಬುದನ್ನು ಮುಂದಿನ ವರ್ಷದ ವೇಳೆಗೆ ಪರಿಶೀಲಿಸಿ, ಮತ್ತೊಮ್ಮೆ ಕೌಶಲ ಶುಲ್ಕ ನಿಗದಿಪಡಿಸಲಾಗುವುದು. ಕೆಲವು ಕಾಲೇಜುಗಳಲ್ಲಿ ಹೊಸ ಹೊಸ ತರಬೇತಿಗಳು ನೀಡುತ್ತಿದ್ದು, ಅದಕ್ಕೂ ಶುಲ್ಕ ಕೇಳುತ್ತಿದ್ದಾರೆ ಎಂದು ಸಚಿವ ಸುಧಾಕರ್ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೆಇಎ ಬಳಿಕ ಕಾಮೆಡ್-ಕೆ ಸೀಟು ಹಂಚಿಕೆ
ಕೆಇಎ ಮೊದಲ ಸುತ್ತಿನ ಸೀಟು ಹಂಚಿಕೆ ನಂತರವೇ ಕಾಮೆಡ್-ಕೆ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಬೇಕು ಎನ್ನುವ ಸಲಹೆಗೆ ಕಾಮೆಡ್-ಕೆ ಒಪ್ಪಿಗೆ ಸೂಚಿಸಿದೆ ಎಂದು ಸಚಿವ ಸುಧಾಕರ್ ಹೇಳಿದರು.
ಇದಲ್ಲದೆ, ಸರ್ಕಾರಿ ಮತ್ತು ಅನುದಾನಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಭರ್ತಿಯಾಗದೆ ಉಳಿಯುವ ಅನೇಕ ವಿಭಾಗಗಳ ಎಂಜಿನಿಯರಿಂಗ್ ಸೀಟುಗಳ ಶುಲ್ಕವನ್ನು ಕಡಿಮೆ ಮಾಡುವ ಬಗ್ಗೆಯೂ ಚಿಂತನೆ ನಡೆದಿದೆ. ಈ ಸಂಬಂಧ ಯಾವ ಕಾಲೇಜುಗಳಲ್ಲಿ, ಯಾವ ಕೋರ್ಸ್ ಗೆ ಪ್ರವೇಶ ಕಡಿಮೆಯಾಗಿದೆ ಎಂಬುದನ್ನು ನೋಡಿಕೊಂಡು, ನಂತರ ತೀರ್ಮಾನಿಸಲಾಗುವುದು ಎಂದು ಹೇಳಿದರು.
ತೆಲಂಗಾಣ ರಾಜ್ಯದಲ್ಲಿ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ಸೀಟುಗಳನ್ನು ಹೆಚ್ಚು ಮಾಡಲು ನಿರ್ಬಂಧ ವಿಧಿಸಿದ್ದು, ಆ ಬಗ್ಗೆ ಕೋರ್ಟ್ ಕೂಡ ಒಂದು ತೀರ್ಪು ನೀಡಿದೆ. ಇದನ್ನು ಪರಿಶೀಲಿಸಿ, ರಾಜ್ಯದಲ್ಲಿ ಆ ರೀತಿ ಮಾಡಿದರೆ ಹೇಗೆ ಎಂಬುದರ ಬಗ್ಗೆ ಚಿಂತನೆ ನಡೆದಿದೆ ಎಂದು ಸಚಿವ ಸುಧಾಕರ್ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸೀಟ್ ಬ್ಲಾಕಿಂಗ್ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಸದ್ಯದಲ್ಲೇ ಪೊಲೀಸ್ ಕಮಿಷನರ್ ಅವರನ್ನು ಕರೆಸಿ, ಹೆಚ್ಚುವರಿ ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.
ENGLISH SUMMARY…
Candidate-Friendly Initiatives at Your Fingertips
KEA Launches College Portal, Mobile App, and KEA Chatbot
Bengaluru:
In a move aimed at enhancing student convenience, the Karnataka Examinations Authority (KEA) has launched three candidate-friendly digital initiatives — a College Portal, a Mobile App, and a Chatbot. These were officially inaugurated on Monday by Higher Education Minister Dr. M.C. Sudhakar.
Speaking at a modest ceremony held at the seminar Hall of the Higher Education Council, the Minister praised KEA for consistently adopting modern technology to streamline examination processes and make them more candidate-centric. “Such advancements ensure timely and accurate information, eliminate confusion, and reduce the dependency on intermediaries,” he stated.
College Portal:
A crucial stage before option entry is selecting the right college. Previously, students had to rely on scattered sources for information. The new College Portal consolidates all relevant data in one place. Colleges themselves have been given access to upload their information directly to the portal.
The portal provides detailed insights into each college’s infrastructure, academic environment, labs, libraries, classrooms, hostels, course-wise fee structure, and details about both guest and permanent faculty. “Many students, unaware of college conditions, make choices blindly and later request changes. This portal will help avoid such issues by enabling informed decision-making,” the Minister explained.
The portal will also include a feature to report any colleges charging excessive fees. Complaints filed here will be directly forwarded to the Fee Regulation Committee.
KEA Mobile App:
In a first-of-its-kind initiative, KEA has launched a mobile application to further enhance candidate accessibility. As youth are generally more comfortable using apps, this tool has been designed for ease of use.
The app provides access to all services available on the KEA website, including application submission, option entry, choice selection, and fee payment. It also features push notifications to keep candidates updated. The app is particularly beneficial for students from rural areas who previously depended on cyber centers and often made costly errors during online application and seat allocation processes.
“Now, with the app, most procedures can be handled directly by the candidates themselves,” the Minister noted.
KEA Chatbot:
Leveraging artificial intelligence, KEA has introduced a chatbot that allows candidates to receive instant answers to their queries. Since its soft launch, over 1.35 lakh students have used the chatbot to seek information — a testament to its utility.
All official KEA information is uploaded to the chatbot system. Candidates can simply type their questions and receive accurate responses based on the available data. This eliminates the need for visiting KEA offices or contacting external centers for information.
Currently, the chatbot responds only in English, but a Kannada version is in the works and expected to be launched within a month. The system is being managed by BSNL.
KEA Executive Director H. Prasanna welcomed guests and gave the introductory address during the launch event.
Box..1
Restructuring Skill Fee:
The previous government allowed engineering colleges to charge an additional fee for various skill-based training programs. This policy is set to be revised next year. The government will assess what training each college is offering and then re-evaluate the fee structure. Some colleges are charging students for newly introduced training modules, prompting a review, the Minister said in response to a question.
COMEDK Seat Allotment to Follow KEA Round:
COMEDK has agreed to begin its seat allotment process only after the completion of KEA’s first round of allotment, the Minister confirmed.
Additionally, the government is considering reducing the fees for unfilled engineering seats in government and aided colleges. A final decision will be made after reviewing which courses and colleges have low enrollment rates.
Citing a recent court ruling in Telangana that restricted the increase of computer science seats, the Minister mentioned that Karnataka is also evaluating the feasibility of a similar move.
Regarding the ongoing seat blocking scam investigation, the Minister stated that police inquiries are underway and that further details would be sought directly from the Police Commissioner soon.
Key words: KEA, Launches, College Portal, Mobile App, KEA Chatbot