ಚಿಕ್ಕಮಗಳೂರು,ಮೇ,13,2025 (www.justkannada.in): ರಾತ್ರೋರಾತ್ರಿ ಹಸು ಕಳ್ಳತನಕ್ಕೆ ಯತ್ನಿಸಿದ ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಅಮಾನವೀಯ ಘಟನೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ತಮ್ಮಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವವರಿಗೆ ಸೇರಿದ ಹಸುವಿನ ಕೆಚ್ಚಲು ಕತ್ತರಿಸಲಾಗಿದೆ. ರಾತ್ರೋರಾತ್ರಿ ಹಸು ಕಳ್ಳತನಕ್ಕೆ ಖದೀಮರು ಯತ್ನಿಸಿದ್ದು, ಕಳ್ಳತನ ವಿಫಲವಾದಾಗ ಕಳ್ಳರು ಕೆಚ್ಚಲು ಕತ್ತರಿಸಿ ಎಸ್ಕೇಪ್ ಆಗಿದ್ದಾರೆ.
ನಂತರ ಹಸು ತೀವ್ರ ರಕ್ತಸ್ರಾವದಿಂದ ಮೃತ ಪಟ್ಟಿದೆ. ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಡೂರು ತಾಲೂಕಿನಲ್ಲಿ ನಿರಂತರವಾಗಿ ಜಾನುವಾರುಗಳ ಕಳ್ಳತನವಾಗುತ್ತಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರು ,ಉತ್ತರ ಕನ್ನಡದ ಬಳಿಕ ಇದೀಗ ಕಾಫಿನಾಡಿನಲ್ಲಿ ಅಮಾನವೀಯ ಘಟನೆ ನಡೆದಿದೆ.
Key words: cut off, cow’s, udder, Inhumane, incident, Chikkamagalore